ಕಂಟೇನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಬಕಾರಿ ಎಸ್‌ಐ ಸೇರಿ ನಾಲ್ವರ ದುರ್ಮರಣ

ಹಾಸನ: ಕಂಟೇನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಕಾರಿನಲ್ಲಿದ್ದ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ನಾಲ್ವರು ಬೆಂಗಳೂರು ಮೂಲದವರಾಗಿದ್ದಾರೆ. ಮೃತಪಟ್ಟವರೆಲ್ಲರೂ 25ರಿಂದ 30ರ ವಯಸ್ಸಿನೊಳಗಿನವರಾಗಿದ್ದಾರೆ. ಮೃತರ ಪೈಕಿ ಚೇತನ್ ಅಬಕಾರಿ ಸಬ್ ಇನ್ ಸ್ಪೆಕ್ಟರ್ ಆಗಿ ಇತ್ತೀಚೆಗೆ ನೇಮಕಗೊಂಡಿದ್ದರು. ಅಭಿಷೇಕ್, ಮಂಜುನಾಥ್, ವಿಕ್ರಂ ಐಟಿ ಉದ್ಯೋಗಿಗಳಾಗಿದ್ದರು.

READ ALSO

ಚೇತನ್ ಡ್ಯೂಟಿ ರಿಪೋರ್ಟ್ ಮಾಡಲೆಂದು ಉಳಿದ ಮೂವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಮೃತದೇಹಗಳನ್ನು ಚನ್ನರಾಯಪಟ್ಟಣ ಸರಕಾರಿ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಹಿನ್ನೆಲೆ ಚನ್ನರಾಯಪಟ್ಟಣ ಸರಕಾರಿ ಶವಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿದರು.