ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರಿದಿದ್ದು, ಗುರುವಾರ ಒಂದೇ ದಿನ ರಾಜ್ಯದಲ್ಲಿ 9386 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,09,792 ಕ್ಕೆ ಏರಿಕೆಯಾಗಿದೆ.
ಗುರುವಾರ ಕೊರೋನಾ ಸೋಂಕಿಗೆ ರಾಜ್ಯದಲ್ಲಿ 141 ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 5232 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಗುರುವಾರ 3355 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸೋಂಕಿಗೆ 59 ಜನರು ಸಾವನ್ನಪ್ಪಿದ್ದಾರೆ.
7866 ಜನರು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.