
ತಿರುಪತಿ: ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಂಸದ ಬಾಲಿ ದುರ್ಗಾ ಪ್ರಸಾದ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ದುರ್ಗಾ ಪ್ರಸಾದ್ ಅವರಿಗೆ ಕೊರೊನಾ ಸೋಂಕು ತಗಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ದುರ್ಗಾ ಪ್ರಸಾದ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ತಮಿಳುನಾಡಿನ ಕನ್ಯಾಕುಮಾರಿ ಕ್ಷೇತ್ರದ ಸಂಸದ ಹೆಚ್ ವಸಂತಕುಮಾರ್ ಅವರು ಸಾವನ್ನಪ್ಪಿದ್ದರು.
