ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 10 ಮಂದಿ ಸೇರಿದಂತೆ ಒಂದೇ ದಿನ ಬರೋಬ್ಬರಿ 30 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಪ್ರಕರಣಗಳು ದೃಢ ಪಟ್ಟಿದ್ದು ರಾಜ್ಯದಲ್ಲಿ ಒಟ್ಟು 1843 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 25317ಕ್ಕೆ ಏರಿಕೆಯಾಗಿದೆ.
ರಾಜ್ಯರಾಜಧಾನಿ ಬೆಂಗಳೂರು, ಗಣಿನಾಡು ಬಳ್ಳಾರಿ, ಉತ್ತರಕನ್ನಡ ಸೇರಿದಂತೆ 29ಜಿಲ್ಲೆಗೆ ತನ್ನ ವಕ್ರದೃಷ್ಟಿ ಹರಿಸಿದೆ.
ಜಿಲ್ಲಾವಾರು ಸೋಂಕಿತರ ವಿವರಗಳು: