ಬೆಂಗಳೂರು: ಪೂರ್ವ ಅಲೆಗಳ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ಮತ್ತು ಗುರುವಾರ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜೊತೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ., ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಇನ್ನು ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣವಿದೆ. ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಬೀಳುವ ಸಾಧ್ಯತೆಯಿದೆ.