
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸ್ಥಿತಿ ಮತ್ತಷ್ಟು ಬಿಗುಡಾಯಿಸಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಂದು ಕೂಡ 5 ಸಾವಿರವನ್ನು ಮೀರಿ ಏರಿಕೆ ಕಂಡಿದೆ.

ರಾಜ್ಯದಲ್ಲಿಂದು 5007 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 85870 ಕ್ಕೆ ಏರಿಕೆಯಾಗಿದೆ.
ಮಹಾಮಾರಿಯ ಆಟಕ್ಕೆ 110 ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಸಾವಿನ ಸಂಖ್ಯೆ 1724 ಕ್ಕೆ ಏರಿಕೆಯಾಗಿದೆ.
ರಾಜ್ಯರಾಜಧಾನಿಯಲ್ಲಿ2267 ಇಂದು ಮಂದಿಗೆ ಸೋಂಕು ದೃಢಪಟ್ಟಿದ್ದು 50 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.
ರಾಜ್ಯದ 30 ಜಿಲ್ಲೆಗಳಲ್ಲೂ ಮಹಾಮಾರಿಯ ಆಟ ಮುಂದುವರೆದಿದ್ದು 13 ಜಿಲ್ಲೆಗಳಲ್ಲಿ ನೂರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯರಾಜಧಾನಿಯ ಬೆನ್ನಲ್ಲೇ ಅರಮನೆ ನಗರಿ ಮೈಸೂರಿನಲ್ಲಿ ನಡುಗಿಸಿದ ಹೆಮ್ಮಾರಿ ಕೃಷ್ಣನಗರಿ ಉಡುಪಿ, ಕಡಲತಡಿ ಮಂಗಳೂರನ್ನು ಬೆಂಬಿಡದೆ ಕಾಡುತ್ತಿದೆ.
ಜಿಲ್ಲಾವಾರು ಸೋಂಕಿತರ ವಿವರಗಳು
