ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ಜತೆಗೆ ರಾಜಕೀಯ ಮುಖಂಡರು, ಸಿನಿಮಾ ತಾರೆಯರು ಸೇರಿ ಎಲ್ಲ ವರ್ಗದವರಿಗೂ ಸೋಂಕು ಕಾಣಿಸಿಕೊಳ್ಳುತ್ತಿದೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಹೋಂ ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಕೊರೊನಾ ಟೆಸ್ಟ್ ನಡೆಸಿದ ವೇಳೆ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಹೋಂ ಕ್ವಾರಂಟೈನ್ಗೊಳಗಾಗಿದ್ದು, ಇವರ ಪತ್ನಿ ಶ್ರೀಮತಿ ಉಷಾ ನಾಯ್ಡು ಅವರಿಗೆ ಕೊರೊನಾ ನೆಗೆಟಿವ್ ಕಾಣಿಸಿಕೊಂಡಿದೆ.