ನಿಯಂತ್ರಣ ತಪ್ಪಿದ ಕೊರೋನಾ 2ನೇ ಅಲೆ! ನಾಳೆಯಿಂದ 14ದಿನಗಳ ಕಾಲ ಕರ್ನಾಟಕ ಲಾಕ್!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕೊನೆ ಅಸ್ತ್ರ ಪ್ರಯೋಗಿಸಿದೆ. ಕೊನೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ನಾಳೆ ಸಂಜೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ನಾಳೆ ಸಂಜೆಯಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಅವರು ಹೇಳಿದ್ದಾರೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು ಆ ನಂತರ ಕಟ್ಟುನಿಟ್ಟಿನ ಲಾಕ್​ಡೌನ್ ಮಾಡಲು ತೀರ್ಮಾನಿಸಲಾಗಿದೆ.

READ ALSO

ಕೃಷಿ ಹಾಗೂ ಕೈಗಾರಿಕಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯು ಸಚಿವ ಕೆ ಸುಧಾಕರ್ ಅವರು ಲಾಕ್​ಡೌನ್ ಮಾಡಲೇಬೇಕು. ಇಲ್ಲದಿದ್ದರೇ ಕಷ್ಟವಾಗುತ್ತದೆ ಎಂದು ಪಟ್ಟು ಹಿಡಿದಿದ್ದರಿಂದ ಯಡಿಯೂರಪ್ಪ ಅವರು ಅನಿವಾರ್ಯವಾಗಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು 14 ದಿನಗಳ ಲಾಕ್ ಡೌನ್ ಬಳಿಕ ಮತ್ತೆ ಕೊರೊನಾ ನಿಯಂತ್ರಣಕ್ಕೆ ಬಾರದೇ ಇದ್ದರೆ ಮತ್ತೆ ಲಾಕ್ ಡೌನ್ ಮುಂದುವರೆಸಲಾಗೋದು ಅಂತಾ ಸಿಎಂ ಹೇಳಿದ್ದಾರೆ.

ಇನ್ನು ಲಾಕ್ ಡೌನ್ ವೇಳೆ ಬಸ್ ಗಳ ಸಂಚಾರ ಕೂಡ ಇರೋದಿಲ್ಲ ಎಂದು ತಿಳಿಸಿದ್ದಾರೆ. ಆದ್ರೆ ಗೂಡ್ಸ್ ವಾಹನಗಳಿಗೆ ನಿರ್ಬಂಧ ಇಲ್ಲ ಎಂದಿದ್ದಾರೆ.