ಕೊರೊನಾ ಲಸಿಕೆ ಎರಡನೇ ಡೋಸ್ ಪಡೆದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಏಮ್ಸ್ ನಲ್ಲಿ ಕೊರೊನಾ ವೈರಸ್ ಲಸಿಕೆಯ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು ಏಮ್ಸ್ ನಲ್ಲಿ ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದಿದ್ದೇನೆ. ಲಸಿಕೆಗೆ ಅರ್ಹರಾದ ಜನರು ಶೀಘ್ರವೇ ಲಸಿಕೆ ಪಡೆಯಿರಿ. ವೈರಸ್ ಅನ್ನು ಸೋಲಿಸಲು ಲಸಿಕೆ ಯು ನಮ್ಮ ಲ್ಲಿರುವ ಮಾರ್ಗಗಳಲ್ಲಿ ಒಂದಾಗಿದೆ. ನೀವು ಲಸಿಕೆಗೆ ಅರ್ಹರಾಗಿದ್ದರೆ, ಶೀಘ್ರದಲ್ಲೇ ಲಸಿಕೆ ಪಡೆಯಿರಿ ಎಂದು ಮನವಿ ಮಾಡಿದ್ದಾರೆ.

READ ALSO