ರಾಜ್ಯದ ಸರಕಾರಿ ನೌಕರ ಕುಟುಂಬಸ್ಥರಿಗೆ ಶುಭ ಸುದ್ಧಿ ನೀಡಿದ ರಾಜ್ಯ ಸರ್ಕಾರ 30 ಲಕ್ಷ ಕೊರೋನಾ ವಿಮಾ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸರಕಾರದ ಆದೇಶ

ಬೆಂಗಳೂರು : ಕೊರೋನಾ ಕರ್ತವ್ಯದಲ್ಲಿ ನಿರತರಾಗಿ ಸೋಂಕಿನಿಂದಾಗಿ ಮೃತಪಟ್ಟರೆ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ 30 ಲಕ್ಷ ವಿಮಾ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಕೊರೋನಾ ವಿಮಾ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಸರ್ಕಾರಿ ನೌಕರರ ಕುಟುಂಬಸ್ಥರಿಗೆ ಶುಭ ಸುದ್ಧಿ ನೀಡಿದೆ.

ಈ ಕುರಿತಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಕೋವಿಡ್-19ರ ರೋಗದಿಂದ ಮೃತಪಟ್ಟ ಸರ್ಕಾರಿ ನೌಕರರ ವಿಮಾ ಪರಿಹಾರ ಮೊತ್ತವನ್ನು ಉಲ್ಲೇಖ(1)ರ ಆದೇಶದ ಕಂಡಿಕೆ 03ರಲ್ಲಿ ತಿಳಿಸಿರುವಂತೆ ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಕರ್ತವ್ಯಗಳನ್ನು ಮಾಡುವಾಗ ಸರ್ಕಾರಿ ನೌಕರರು ಕೋವಿಡ್-19 ರೋಗಕ್ಕೆ ತುತ್ತಾಗಿ ಮೃತರಾದರೇ, ಜಿಲ್ಲಾ ಮಟ್ಟದಲ್ಲಿ ಡಿಸಿ ಮತ್ತು ಟಿಹೆಚ್‌ಓ, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಮತ್ತು ಕೋವಿಡ್ ನೋಡಲ್ ಅಧಿಕಾರಿಯಿಂದ ಪ್ರಮಾಣ ಪತ್ರವನ್ನು ಪಡೆದು, ನಂತ್ರ ಕಂಡಿಕೆ 02 ರಡಿಯಲ್ಲಿ ಸೂಚಿಸಿರುವಂತೆ ಮೃತಪಟ್ಟ ಸರ್ಕಾರಿ ನೌಕರರ ಸಂಬಳವನ್ನು ಯಾವ ಲೆಕ್ಕ ಶೀರ್ಷಿಕೆಯಡಿ ಸೆಳೆಯಲಾಗುತ್ತದೆಯೋ, ಸದರಿ ಲೆಕ್ಕ ಶೀರ್ಷಿಕೆಯ ಕಚೇರಿ ವೆಚ್ಚಗಳಡಿ ಸೆಳೆಯಬೇಕಾಗುತ್ತದೆ ಎಂದು ಆದೇಶಿಸಲಾಗಿದೆ.

ಒಂದು ವೇಳೆ ಆ ಲೆಕ್ಕ ಶೀರ್ಷಿಕೆಯಲ್ಲಿ ಅನುದಾನ ಲಭ್ಯವಿಲ್ಲವೆಂದು ಕಂಡುಬಂದಲ್ಲಿ, ಉಲ್ಲೇಖ (2)ರಲ್ಲಿ ತಿಳಿಸಿರುವಂತೆ ಕೋವಿಡ್-19ರ ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮದಡಿ ನಿಯೋಜನೆಗೊಂಡ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ರೋಗಗ್ರಸ್ತರ ಸಂಪರ್ಕದಿಂದ ಮರಣ ಹೊಂದಿದ್ದಲ್ಲಿ ಅವರ ಕುಟುಂಬಸ್ಥರಿಗೆ ರೂ.30 ಲಕ್ಷಗಳನ್ನು ಪರಿಹಾವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಯಲ್ಲಿ ಲಭ್ಯವಿರುವ ಅನುದಾನದಿಂದ ಭರಿಸುವಂತೆ ಆದೇಶ ಹೊರಡಿಸಲಾಗಿದೆ.

ಅದರಂತೆ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಗಳಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ ಮೃತರಾದ ನೌಕರರ ಕುಟುಂಬಕ್ಕೆ 30 ಲಕ್ಷ ವಿಮಾ ಮೊತ್ತವನ್ನು ಉಲ್ಲೇಖ(1) ಅಥವಾ ಉಲ್ಲೇಖ(2)ರ ಆದೇಶದಂತೆ ಮೃತರ ಕುಟುಂಬಕ್ಕೆ ಪಾವತಿಸಲು ಸೂಚಿಸಿದ್ದಾರೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 25 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 88 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 210 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 35 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 25 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 21 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ