ಕೊರೋನಾ ನಾಲ್ಕನೇ ಅಲೆ ಭೀತಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಸಧ್ಯ ಪ್ರಕರಣಗಳ ಸಂಖ್ಯೆ ಏರಿಕೆಯಾಗ್ತಿರುವ ಹಿನ್ನೆಲೆಯಲ್ಲಿ 28 ರಿಂದ ರಾಜ್ಯದಲ್ಲಿ ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಆದ್ರೆ, ಸಧ್ಯ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗ್ತಿರುವುದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗ್ತಿದ್ದು, ಕರ್ನಾಟಕದಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಸರ್ಕಾರ ತಿಳಿಸಿದೆ. ಇನ್ನು ಒಂದು ಪೂರ್ವಭಾವಿ ಹೆಜ್ಜೆಯಾಗಿ ಕೋವಿಡ್ ಪ್ರಕರಣಗಳ ಏರಿಕೆಯನ್ನ ಕಡಿಮೆ ಮಾಡಿಲು ಸರ್ಕಾರ ಈ ಆದೇಶವನ್ನ ಹೊರಡಿಸಿರುವುದಾಗಿ ತಿಳಿಸಿದೆ.

READ ALSO

ಆದೇಶದ ಪ್ರಕಾರ, ರಾಜ್ಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಅನ್ವಯ ರಾಜ್ಯದಲ್ಲಿ ಮಾಸ್ಕ್‌ ಧಾರಣೆ ಕಡ್ಡಾಯಗೊಳಿಸಿದೆ. ಅದ್ರಂತೆ, ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳಲ್ಲಿ ಮತ್ತು ಸಾರಿಗೆ ಸಮಯದಲ್ಲಿ ಉಗುಳಿದ್ರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದೆ.

ಇದಲ್ಲದೆ, ವ್ಯಕ್ತಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 2 ಅಡಿಗಳ ಅಂತರ ಕಾಯ್ದುಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ