ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಾ ಕೊರೋನಾತಂಕ! ಮದುವೆ, ಸಭೆ ಸಮಾರಂಭಗಳಿಗೆ ಬೀಳುತ್ತಾ ಬ್ರೇಕ್!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಹೊಸ ವೈರಸ್ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.

ಬ್ರಿಟನ್, ಬ್ರಿಜಿಲ್, ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಹೊಸ ವೈರಸ್ ಸೋಂಕಿನ ಜೊತೆಗೆ ಆಂಧ್ರಪ್ರದೇಶದಲ್ಲಿಯೂ ಹೊಸ ಮಾದರಿಯ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಕೋವಿಡ್ ತಾಂತ್ರಿಕ ಸಮಿತಿ ಸೂಚಿಸಿದೆ. ಅದ್ರಲ್ಲೂ ಜನರು ಗುಂಪು ಸೇರುವುದನ್ನು ತಪ್ಪಿಸುವಂತೆ ಸಲಹೆ ನೀಡಿದೆ.

READ ALSO

ಕೋವಿಡ್ ತಾಂತ್ರಿಕ ಸಮಿತಿ ಸಲಹೆ ನೀಡಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮದುವೆ, ಸಭೆ ಹಾಗೂ ಸಮಾರಂಭಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾದ್ರೆ ಮದುವೆ ಸಮಾರಂಭಗಳಿಗೆ 50 ಜನರಿಗಷ್ಟೇ ಅವಕಾಶ ನೀಡುವ ಸಾಧ್ಯತೆಯಿದೆ. ಈ ಕುರಿತು ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನು ಹೊರಡಿಸುವ ಸಾಧ್ಯತೆಯಿದೆ.