ಕೋವಿಡ್ ಮಿತ್ರದ ಬಗ್ಗೆ ಶೀಘ್ರದಲ್ಲೇ ಕೇಂದ್ರಕ್ಕೆ ಮಾಹಿತಿ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ ಜಿಲ್ಲೆಗಳೊಂದಿಗೆ ಚರ್ಚೆ ನಡೆಸಿದ್ದು, ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ಕೇಳಿದರು. ನಮ್ಮ ಜಿಲ್ಲೆಯಲ್ಲಿ ಆರಂಭಿಸಿರುವ ಕೋವಿಡ್ ಮಿತ್ರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಹೇಳಿದ್ದಾರೆ.

ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿಯವರು ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾಹಿತಿ ನೀಡಿದರು.

READ ALSO

ನಮ್ಮ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಶೇ.50ರಷ್ಟು ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಚಿಕಿತ್ಸೆಗೆ ನೆರವಾಗಲು 150 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕೋವಿಡ್ ಮಿತ್ರಗಳನ್ನಾಗಿ ಪರಿವರ್ತಿಸಲಾಗಿದೆ.