ಕೋವಿಡ್ ನಿಯಮ ಪಾಲನೆಯೊಂದಿಗೆ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ

ಮಂಗಳೂರು: ಕೊರೋನಾ ವೈರಸ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ದ.ಕ. ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿದ್ದು, ಈ ನಡುವೆ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರು ಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದೇನೆ. ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ ಪುನಸ್ಕಾರ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಿದ್ದಾರೆ.

READ ALSO

ಬಯಲು ಪ್ರದೇಶ, ಮೈದಾನ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸುವ ಸಂದರ್ಭ ಗರಿಷ್ಟ ೫೦೦ ಜನಕ್ಕಿಂತ ಜಾಸ್ತಿ ಜನ ಸೇರಿಸದಂತೆ ಉಲ್ಲೇಖಿಸಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇದರಿಂದ ಕಳೆದ ವರ್ಷಗಳಿಂದ ಬಾಕಿಯಾಗಿದ್ದ ಕೋಲ, ನೇಮ, ಪೂಜೆ ಪುನಸ್ಕಾರ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಮತ್ತೆ ನಡೆಸಲು ಅನುವು ಸಿಕ್ಕಂತಾಗಿದೆ.