ಕೋವಿಡ್ ಲಸಿಕೆ ಪಡೆಯಲು ‘OTP’ ಕಡ್ಡಾಯ ಕೋವಿನ್‌ನಲ್ಲಿ ಇಂದಿನಿಂದ 4 ಅಂಕಿಗಳ ಸೆಕ್ಯುರಿಟಿ ಕೋಡ್‌!

ಲಸಿಕೆ ನೋಂದಣಿ ವೇಳೆ ಡೇಟಾ ಎಂಟ್ರಿ ಪ್ರಮಾಣ ತಪ್ಪಿಸಲು ಕ್ರಮ ಲಸಿಕೆ ಪಡೆಯದಿದ್ದರೂ ನಿಮ್ಮ ಹೆಸರಲ್ಲಿ ಲಸಿಕೆ ಪ್ರಮಾಣಪತ್ರ ಸೃಷ್ಟಿ ಆಗಿದೆಯೇ? ನೋಂದಣಿ ಮಾಡು ವಾಗ ಡೇಟಾ ಎಂಟ್ರಿ ವೇಳೆ ಆಗುತ್ತಿದ್ದ ಈ ಪ್ರಮಾದ ತಪ್ಪಿಸಲು ಕೋವಿನ್‌ ಪೋರ್ಟಲ್‌ನಲ್ಲಿ ಶನಿವಾರದಿಂದಲೇ ಹೊಸ ಫೀಚರ್‌ವೊಂದನ್ನು ಪರಿಚಯಿಸಲಾಗಿದೆ.

ಏನಿದು ಹೊಸ ಫೀಚರ್‌? :

ಇನ್ನು ಮುಂದೆ ಕೋವಿನ್‌ ಪೋರ್ಟಲ್‌ನಲ್ಲಿ ನೀವು ಲಸಿಕೆಗೆ ಹೆಸರು ನೋಂದಣಿ ಮಾಡಿ, ಲಸಿಕೆಗೆ ದಿನಾಂಕ ನಿಗದಿಪಡಿಸಿದರೆ, ಕೂಡಲೇ ನಿಮಗೆ “4 ಅಂಕಿಗಳ ಭದ್ರತ ಕೋಡ್‌’ವೊಂದನ್ನು ನೀಡಲಾಗುತ್ತದೆ. ಲಸಿಕಾ ಕೇಂದ್ರಕ್ಕೆ ಹೋದಾಗ ಆ ಸೆಕ್ಯುರಿಟಿ ಕೋಡ್‌ ಅನ್ನು ತೋರಿಸಿದರಷ್ಟೇ ನಿಮಗೆ ಲಸಿಕೆ ನೀಡಲಾಗುತ್ತದೆ.

ಏಕೆ ಈ ಹೊಸ ಕೋಡ್‌?

ಹಲವು ಮಂದಿ ಕೋವಿನ್‌ ಪೋರ್ಟಲ್‌ನಲ್ಲಿ ಲಸಿಕೆಗೆ ನೋಂದಣಿ ಮಾಡಿಕೊಂಡಿರುತ್ತಾರೆ. ಆದರೆ ಅನಿವಾರ್ಯ ಕಾರಣಗಳಿಂದಾಗಿ ನಿಗದಿತ ದಿನಾಂಕದಂದು ಹೋಗಿ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯ ವಾಗಿರುವುದಿಲ್ಲ. ಆದರೂ, ಅವರ ಮೊಬೈಲ್‌ಗೆ “ನೀವು ಯಶಸ್ವಿಯಾಗಿ ಲಸಿಕೆ ಹಾಕಿಸಿಕೊಂಡಿದ್ದೀರಿ’ ಎಂಬ ಸಂದೇಶ ಮತ್ತು ಲಸಿಕೆ ಪ್ರಮಾಣಪತ್ರ ಬರುತ್ತದೆ. ಈ ಬಗ್ಗೆ ಅನೇಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಹೊಸ ಭದ್ರತ ಫೀಚರ್‌ ಅನ್ನು ಪರಿಚಯಿಸಲಾಗಿದೆ.

ಬೇರೆಡೆ ಇಂಥ ಫೀಚರ್‌ ಬಳಕೆಯಾಗುತ್ತಿದೆಯೇ? : ಪ್ರಯಾಣಿಕರು ಓಲಾ ಕ್ಯಾಬ್‌ ಬುಕ್‌ ಮಾಡಿದೊಡನೆ ಅವರಿಗೆ 4 ಅಂಕಿಗಳ ಪಾಸ್‌ವರ್ಡ್‌ ಕಳುಹಿಸಲಾಗುತ್ತದೆ. ಈ ಪಾಸ್‌ವರ್ಡ್‌ ಕ್ಯಾಬ್‌ ಚಾಲಕನಿಗೆ ಗೊತ್ತಿರುವುದಿಲ್ಲ. ನೀವು ಕ್ಯಾಬ್‌ ಅಥವಾ ಕಾರು ಹತ್ತಿದ ಬಳಿಕ ಆ ಪಾಸ್‌ವರ್ಡ್‌ ಅನ್ನು ನೀವು ಚಾಲಕನಿಗೆ ನೀಡುತ್ತೀರಿ. ಇದೇ ರೀತಿ, ಕೆಲವು ಅಧಿಕ ಮೌಲ್ಯದ ಸರಕುಗಳ ರವಾನೆ ವೇಳೆ ಇ-ಕಾಮರ್ಸ್‌ ಕಂಪನಿಗಳು ಗ್ರಾಹಕರಿಗೆ ಒನ್‌ ಟೈಂ ಪಿನ್‌ ನೀಡುತ್ತವೆೆ. ಸರಕು ಸರಿಯಾದ ವ್ಯಕ್ತಿಗೇ ತಲುಪಿದೆ ಎನ್ನುವುದನ್ನು ಖಾತ್ರಿಪಡಿಸುವುದು ಇದರ ಉದ್ದೇಶ. ಇದೇ ಮಾದರಿಯಲ್ಲಿ ಕೋವಿನ್‌ ಪೋರ್ಟಲ್‌ನ 4 ಅಂಕಿಗಳ ಸೆಕ್ಯುರಿಟಿ ಕೋಡ್‌ ಕೂಡ ಕೆಲಸ ಮಾಡುತ್ತದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ