ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ ಮತ್ತು ಉಸಿರಾಟದ ಸಮಸ್ಯೆಗಳಿರುವ ವ್ಯಕ್ತಿಗಳು ಮಾರುಕಟ್ಟೆ, ಅಂಗಡಿ, ಮಳಿಗೆಗಳಿಗೆ ಭೇಟಿ ನಿಷೇಧಿಸಿದ ರಾಜ್ಯಸರಕಾರ!

ಬೆಂಗಳೂರು: ಕೋವಿಡ್‌-19ರ ರೋಗ ಲಕ್ಷಣಗಳಾದ ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ ಮತ್ತು ಉಸಿರಾಟದ ಸಮಸ್ಯೆಗಳಿರುವ ವ್ಯಕ್ತಿಗಳು ಮಾರುಕಟ್ಟೆ, ಅಂಗಡಿ, ಮಳಿಗೆಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೋಗ ಲಕ್ಷಣ ರಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೋವಿಡ್‌-19ರ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಮಾರುಕಟ್ಟೆ ಮತ್ತು ಅಂಗಡಿ ಮಳಿಗೆಗಳ ನಿರ್ವಹಣೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಗರಿಷ್ಠ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಅಂಗಡಿ ಮಳಿಗೆಗಳ ಪ್ರವೇಶ ದ್ವಾರದಲ್ಲೇ ಎಲ್ಲ ಉದ್ಯೋಗಿಗಳು ಮತ್ತು ಗ್ರಾಹಕರಿಗೆ ಥರ್ಮಲ್‌ ಸ್ಕ್ಯಾನ್‌ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಮುಖಗವಸು ಅಥವಾ ಫೇಸ್‌ ಕವರ್‌ ಧರಿಸಿರಲೇಬೇಕು. ಆರು ಅಡಿ ಅಂತರದ ಪಾಲನೆ ಆಗುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಆನ್‌ಲೈನ್‌ ವ್ಯವಹಾರಕ್ಕೆ ಉತ್ತೇಜನ ನೀಡಬೇಕು. ಪಾಳಿಯಂತೆ ಅಂಗಡಿ ಮುಂಗಟ್ಟು ತೆರೆಯುವುದು ಮತ್ತು ಅಂಗಡಿಗಳು ತೆರೆಯುವ ಅವಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಲೋಚಿಸಬೇಕು. ಅನಧಿಕೃತ ಪಾರ್ಕಿಂಗ್‌ಗೆ ಅವಕಾಶ ನೀಡಬಾರದು. ಜನ ಸಂದಣಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 271 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 43 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 310 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 52 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ