ಮಂಗಳೂರು : ಕೋವಿಡ್-19 ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಪಾನ್ ಮಸಾಲ, ಜರ್ದಾ, ಸಿಗರೇಟ್, ಖೈನಿ ಇತ್ಯಾದಿ ಉತ್ಪನ್ನಗಳನ್ನು ಮಾರಾಟ ಹಾಗೂ ಸಾರ್ವಜನಿಕ ಬಳಕೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೂ ಪಾನ್ ಮಸಾಲ, ಜರ್ದಾ, ಖೈನಿ,ಮುಂತಾದ ಜಗಿಯುವ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.
ಒಂದು ವೇಳೆ ನಿಯಮವನ್ನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದೆ.