TRENDING
Next
Prev

ಕೋವಿಶೀಲ್ಡ್ ಲಸಿಕೆ 300 ರುಪಾಯಿಗಳಿಗೆ ಒದಗಿಸಲು ಸೇರಮ್ ಸಮ್ಮತಿ

ಮುಂಬೈ: ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ, ಆಸ್ಟ್ರಾಜೆನೆಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಕೊರೊನಾ ಸೋಂಕು ನಿರೋಧಕ ಲಸಿಕೆ ಕೋವಿಶೀಲ್ಡ್​ನ ಪ್ರತಿ ಡೋಸ್​ ₹ 300ಕ್ಕೆ ರಾಜ್ಯ ಸರ್ಕಾರಕ್ಕೆ ಒದಗಿಸಲು ಪುಣೆಯ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಧಾರ್ ಪೂನಾವಾಲಾ ಒಪ್ಪಿಕೊಂಡಿದ್ದಾರೆ.

ಕಂಪನಿಯು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇರುವ ಸಂಪನ್ಮೂಲದಲ್ಲಿಯೇ ಹೆಚ್ಚಿನ ಸಂಖ್ಯೆಯ ಲಸಿಕೆ ಬಾಟಲಿಗಳನ್ನು ಖರೀದಿಸಲು ರಾಜ್ಯಗಳಿಗೆ ಅನುಕೂಲ ಮಾಡಿಕೊಡಲೆಂದು ‘ಉದಾರ’ ಮನೋಭಾವದಿಂದ ಕಂಪನಿಯು ಲಸಿಕೆಯ ಬೆಲೆಯಲ್ಲಿ ಶೇ 25ರಷ್ಟು ರಿಯಾಯ್ತಿ ನೀಡಲು ನಿರ್ಧರಿಸಿದೆ.

READ ALSO

ಪ್ರತಿ ಡೋಸ್​ ಇನ್ನು ಮುಂದೆ ರಾಜ್ಯ ಸರ್ಕಾರಗಳಿಗೆ ₹ 300ಕ್ಕೆ ಲಭ್ಯವಾಗಲಿದೆ ಎಂದು ಹೇಳಿದೆ.

ದೇಶದ ಅತಿದೊಡ್ಡ ಲಸಿಕೆ ಉತ್ಪಾದಕಾ ಕಂಪನಿಯಾಗಿರುವ ಸೆರಮ್ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ ಈ ಹಿಂದೆ ರಾಜ್ಯ ಸರ್ಕಾರಗಳಿಗೆ ಕೋವಿಶೀಲ್ಡ್​ನ ಪ್ರತಿ ಡೋಸ್​ ₹ 400ಕ್ಕೆ ಒದಗಿಸಲು ಒಪ್ಪಿಕೊಂಡಿತ್ತು. ಖಾಸಗಿ ಆಸ್ಪತ್ರೆಗಳಿಗೆ ಈ ದರ ₹ 600 ಆಗಿರುತ್ತದೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಆಕ್ಸ್​ಫರ್ಡ್​-ಆಸ್ಟ್ರಜೆನೆಕಾ ಲಸಿಕೆಯ ಭಾರತೀಯ ಆವೃತ್ತಿಯಾಗಿರುವ ಕೋವಿಶೀಲ್ಡ್​ ಲಸಿಕೆಯನ್ನು ಭಾರತದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ನೀಡಲಾಗುತ್ತಿದೆ. ಇದರ ಜೊತೆಗೆ ಭಾರತ್​ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನೂ ಭಾರತದಲ್ಲಿ ನೀಡಲಾಗುತ್ತಿದೆ. ರಾಜ್ಯ ಸರ್ಕಾರಗಳಿಗೆ ಕೋವ್ಯಾಕ್ಸಿನ್ ₹ 600ಕ್ಕೆ ಸಿಗುತ್ತಿದೆ. ಖಾಸಗಿ ಆಸ್ಪತ್ರೆಗಳು ₹ 1200 ಪಾವತಿಸಿ ಪಡೆದುಕೊಳ್ಳುತ್ತಿವೆ.