ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೇಶ್ ಪಿ.ಜಿಯವರನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ಅವರು ಖಡಕ್ ಖಾಕಿ ಎಂದೇ ಹೆಸರುವಾಸಿಯಾಗಿದ್ದರು. ಇತ್ತಿಚ್ಚೇಗೆ ಉಜಿರೆಯ ಬಾಲಕನ ಅಪಹರಣ ಪ್ರಕರಣವನ್ನು ಭೇದಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎನ್ನಲಾಗಿದೆ.

READ ALSO

ಬೆಳ್ತಂಗಡಿ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ರವರು ನಂತರ ಬೆಳ್ತಂಗಡಿಯಲ್ಲಿಯೇ ವೃತ್ತ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದರು.

ಸಂದೇಶ್ ಪಿ.ಜಿಯವರನ್ನು ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸಂದೇಶ್ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಸದ್ಯಕ್ಕೆ ಯಾರನ್ನು ನೇಮಕ ಮಾಡಿಲ್ಲ. ಬಲ್ಲ ಮೂಲಗಳ ಪ್ರಕಾರ ಮೈಸೂರಿನ ಇನ್ಸ್ ಪೆಕ್ಟರ್ ಶಿವಕುಮಾರ್ ಈ ಜವಾಬ್ದಾರಿಯನ್ನು ಹೊರಲಿದ್ದಾರೆ ಎನ್ನಲಾಗುತ್ತಿದೆ.