ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 2020-21 ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಅವಧಿ ಬೆಳೆಗಳಿಗೆ ವಿಮೆ ಪಾವತಿ ಅವಧಿಯನ್ನು ವಿಸ್ತರಣೆ ಮಾಡಿದೆ.
ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜು. 10 ರವರೆಗೆ ವಿಸ್ತರಿಸಲಾಗಿದ್ದು, ತೋಟಗಾರಿಕೆ ಬೆಳೆಗಾರರು ತಮ್ಮ ಹತ್ತಿರದ ಬ್ಯಾಂಕುಗಳಲ್ಲಿ ಮತ್ತು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಪಾವತಿಸಲು ಅವಕಾಶ ನೀಡಲಾಗಿದೆ.