ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ

ದೇವದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರವನ್ನು ಶಿಕ್ಷಕರ ತರಬೇತಿ ಕೇಂದ್ರದ ಸಭಾಭವನದಲ್ಲಿ ನಡೆಸಲಾಯಿತು.

CSC ಸೇವಾಕೇಂದ್ರಕ್ಕೆ ಲ್ಯಾಪ್ ಟಾಪ್ ನೀಡಲಾಯಿತು.

ತರಬೇತಿ ಕಾರ್ಯಾಗಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಪರಿಕಲ್ಪನೆ ಮತ್ತು ಸೇವಾ ಚಟುವಟಿಕೆಗಳ ಬಗ್ಗೆ ಮತ್ತು ಗ್ರಾಮೀಣ ಜನರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವ ಸಲುವಾಗಿ ರಾಜ್ಯಾದ್ಯಂತ 6ಸಾವಿರ CSC ಸೇವಾ ಕೇಂದ್ರಗಳನ್ನು ಮಾಡಲು ಧರ್ಮಸ್ಥಳದ ಧರ್ಮಾಧಿಕಾರಿ ಯವರು ಮಂಜೂರಾತಿ ನೀಡಿದ್ದು ಮುಂದಿನ ದಿನಗಳಲ್ಲಿ ಪ್ರತಿಯೊಂದು ಗ್ರಾಮದಲ್ಲಿಯೂ ಇಂತಹ ಸೇವಾ ಕೇಂದ್ರ ತೆರೆಯಲು ಮುಂದಾಗಿದ್ದು, ಇದರೊಂದಿಗೆ ಯುವಜನತೆಗೆ ಉದ್ಯೋಗಾವಕಾಶ ಒದಗಿಸುವ ಕೆಲಸವನ್ನು ಪೂಜ್ಯರು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಜನಸಾಮಾನ್ಯರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹತ್ತು ಸಾವಿರಕ್ಕೂ ಅಧಿಕ ಸಾಮಾನ್ಯ ಸೇವಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದಾರೆ. ಸಾಮಾನ್ಯ ಸೇವಾ ಕೇಂದ್ರಗಳಿಂದ ಸಾರ್ವಜನಿಕರಿಗೆ ಸುಮಾರು 700 ಸೇವೆಗಳು ದೊರೆಯಲಿವೆ. ಈ ಹಿನ್ನೆಲೆಯಲ್ಲಿ CSC ಕೇಂದ್ರವನ್ನು ವ್ಯವಸ್ಥಿತವಾಗಿ ನಡೆದುಕೊಂಡು ಮುನ್ನಡೆಸಲು ಉತ್ತಮ ತರಬೇತಿಯ ಅವಶ್ಯಕವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ ತಿಳಿಸಿದರು.

ಅಜೀಂ ಫೌಂಡೇಶನ್ ತಾಲೂಕು ಸಂಯೋಜಕರಾದ ಡಾ. ಅಂದ್ರಾಳ ಗವಿಸಿದ್ದಪ್ಪ ರವರು ಮಾತನಾಡಿ ಯೋಜನೆ ಯೋಚನೆ ಯೊಂದಿಗೆ ಉತ್ತಮ ಸೇವೆ ನೀಡಲು ನಾವು ಜನಸಾಮಾನ್ಯರ ಜೊತೆ ಕಾಯನಿರ್ವಹಿಸಲು ಉತ್ಸಾಹ ರಿಂದ ಪೂಜ್ಯರ ಆಶಯದಂತೆ ಪಾರದರ್ಶಕ, ಪ್ರಾಮಾಣಿಕತೆಯಿಂದ ಸೇವೆಯನ್ನು ನೀಡುವ ಜೊತೆಗೆ ತಾವೂ ಉಜ್ವಲವಾಗಿ ಉತ್ಕೃಷ್ಟ ವಾಗಿ ಬೆಳೆಯಬೇಕು ಎಂದು ಶುಭಹಾರೈಸಿದರು.

ಜಿಲ್ಲಾ ಜನಜಾಗೃತಿ ಸದಸ್ಯರಾದ ಸತೀಶ್ ಬಳೆಯವರು ಮಾತನಾಡಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಜನರಿಗೆ ಉತ್ತಮ ಸೇವೆ ನೀಡಲು ಕಾರ್ಯಪ್ರವೃತ್ತರಾಗಿ ಧರ್ಮಸ್ಥಳ ಸಂಸ್ಥೆಯ ಯಾವುದೇ ಕಾರ್ಯಕ್ರಮಗಳು ಪಾರದರ್ಶಕವಾಗಿರುತ್ತದೆ. ಜನರಿಗೆ ಅರಿವು ಮೂಡಿಸುವ ಮೂಲಕ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿಗಳಾದ ಉಮೇಶ್, ರಾಜೇಶ್.ಎಂ, ರಾಷ್ಟ್ರೀಯ ಸ್ವಸಹಾಯ ತಂಡಗಳ ತರಬೇತಿ ಸಂಸ್ಥೆ ಉಡುಪಿಯ ಉಪನ್ಯಾಸಕ ರಾದ ರಮೇಶ್, ಐಟಿ ಪ್ರಬಂಧಕರಾದ ಪ್ರದೀಪ್, ಜಿಲ್ಲಾ ಸಂಯೋಜಕ ಶಿವರಾಜ್, ಶಂಕರಪ್ಪ, ರೂಪಾಶ್ರೀ, ತಾಲೂಕು ಸಂಯೋಜಕ ರಾಜು ಮತ್ತು ಗ್ರಾಮಮಟ್ಟದ VLE ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love
  • Related Posts

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ಸಕಲೇಶಪುರ: ಬೆಂಗಳೂರು ಮಂಗಳೂರು ಸಂಪರ್ಕರಸ್ತೆಯ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ.…

    Spread the love

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    You Missed

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 36 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 170 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 82 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 281 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 192 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 114 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು