ವಿದ್ಯುತ್ ಇನ್ಮುಂದೆ ಗ್ರಾಹಕರ ಹಕ್ಕು, ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಜಮೆಯಾಗಲಿದೆ ಸಬ್ಸಿಡಿ ಹಣ!

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್ತನ್ನು ಗ್ರಾಹಕರ ಹಕ್ಕು ಎಂದು ಪರಿಗಣಿಸಲು ಕೇಂದ್ರ ಸರ್ಕಾರ ನಿಯಮಾವಳಿ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಇದು ಜಾರಿಗೆ ಬಂದರೆ ವಿದ್ಯುತ್‌ ಪಡೆಯುವುದು ಈ ದೇಶದಲ್ಲಿರುವ ಎಲ್ಲರ ಹಕ್ಕಾಗಲಿದೆ.

ಪದೇಪದೇ ಕರೆಂಟ್‌ ಹೋಗುತ್ತದೆ, ಎಸ್ಕಾಂನವರಿಗೆ ಎಷ್ಟುಫೋನ್‌ ಮಾಡಿದರೂ ಪ್ರಯೋಜನವಿಲ್ಲ, ಅರ್ಜಿ ಸಲ್ಲಿಸಿ ಎಷ್ಟುದಿನವಾದರೂ ವಿದ್ಯುತ್‌ ಸಂಪರ್ಕ ನೀಡುತ್ತಿಲ್ಲ, ಹಳ್ಳಿಯಲ್ಲಿ ವಿದ್ಯುತ್ತೇ ಇರುವುದಿಲ್ಲ ಆದರೆ ಬಿಲ್‌ ಮಾತ್ರ ಬರುತ್ತದೆ ಇಂತಹ ಸಮಸ್ಯೆಗಳಿಗೆಲ್ಲ ಕೇಂದ್ರ ಸರ್ಕಾರ ಶೀಘ್ರದಲ್ಲೇ ಇತಿಶ್ರೀ ಹಾಡಲಿದೆ.

ಅರ್ಜಿ ಸಲ್ಲಿಸಿದ ನಿರ್ದಿಷ್ಟ ಸಮಯದೊಳಗೆ ಇಂಧನ ಇಲಾಖೆ ವಿದ್ಯುತ್‌ ಸಂಪರ್ಕ ನೀಡಬೇಕಾಗುತ್ತದೆ. ಅಲ್ಲದೆ, ವಿದ್ಯುತ್‌ ಗ್ರಾಹಕರ ಎಲ್ಲಾ ಸಮಸ್ಯೆಗಳನ್ನೂ ನಿರ್ದಿಷ್ಟ ಸಮಯದೊಳಗೆ ಆನ್‌ಲೈನ್‌ನಲ್ಲೇ ಬಗೆಹರಿಸಬೇಕಾಗುತ್ತದೆ.

ಈ ಸಂಬಂಧ ಕೇಂದ್ರ ಇಂಧನ ಇಲಾಖೆಯು ಕರಡು ನಿಯಮಾವಳಿ ರೂಪಿಸಿದ್ದು, ಅದಕ್ಕೆ ಈ ವರ್ಷದ ಸೆ.30ರೊಳಗೆ ಜನರಿಂದ ಆಕ್ಷೇಪಣೆ ಆಹ್ವಾನಿಸಿದೆ. ನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮವಾಗಿ ‘ವಿದ್ಯುತ್‌ (ಗ್ರಾಹಕರ ಹಕ್ಕು) ನಿಯಮಾವಳಿ-2020’ನ್ನು ಪ್ರಕಟಿಸಲಿದೆ.

ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಸಬ್ಸಿಡಿ ಹಣ ಜಮೆ.

ಜನರು ಕೇವಲ 2 ದಾಖಲೆ ಸಲ್ಲಿಸಿ ವಿದ್ಯುತ್‌ ಸಂಪರ್ಕ ಪಡೆಯಲು ಸರಳ ವ್ಯವಸ್ಥೆ ಇರಬೇಕು.

ಮೆಟ್ರೋ ನಗರಗಳಲ್ಲಿ ಜನರು ಅರ್ಜಿ ಸಲ್ಲಿಸಿದ 7 ದಿನ, ಮುನ್ಸಿಪಲ್‌ ಪಟ್ಟಣಗಳಲ್ಲಿ 15 ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ 30 ದಿನದೊಳಗೆ ವಿದ್ಯುತ್‌ ಸಂಪರ್ಕ ನೀಡಬೇಕು ಅಥವಾ ಈಗಾಗಲೇ ನೀಡಿರುವ ಸಂಪರ್ಕವನ್ನು ಬದಲಿಸಿಕೊಡಬೇಕು.

ಒಂದು ವರ್ಷಕ್ಕೆ ಒಬ್ಬ ಗ್ರಾಹಕನಿಗೆ ಗರಿಷ್ಠ ಇಷ್ಟೇ ಸಲ ಹಾಗೂ ಇಷ್ಟುತಾಸು ಮಾತ್ರ ವಿದ್ಯುತ್‌ ಕಡಿತಗೊಳಿಸಬಹುದು ಎಂಬ ಮಿತಿ ಇರಬೇಕು.

ಹೊಸ ಸಂಪರ್ಕ, ವರ್ಗಾವಣೆ, ರಿಪೇರಿ, ವಿದ್ಯುತ್‌ ಕಡಿತ ಇತ್ಯಾದಿ ಸಮಸ್ಯೆಗಳನ್ನು ಗ್ರಾಹಕರು ಬಗೆಹರಿಸಿಕೊಳ್ಳಲು ಆಯಪ್‌ ಆಧಾರಿತ ವ್ಯವಸ್ಥೆ ತರಬೇಕು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 278 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 315 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 53 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ