ಬಾರಿ ಚರ್ಚೆಗೆ ಗ್ರಾಸವಾಗಿದ್ದ ಮೈಸೂರಿನ ಇಬ್ಬರೂ IAS ಅಧಿಕಾರಿಗಳ ಎತ್ತಂಗಡಿ!

ಬೆಂಗಳೂರು: ಕಳೆದ ಹಲವು ದಿನಗಳಿಂದ ಮುಂದುವರೆಯುತ್ತಿದ್ದ ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ರಾಜ್ಯ ಸರ್ಕಾರ ತಾರ್ಕಿಕ ಅಂತ್ಯ ನೀಡಿದೆ. ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್ ನಿರ್ವಹಣೆ ಸಂಬಂಧ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನಡುವೆ ವಾಗ್ವಾದ ಏರ್ಪಟ್ಟಿತ್ತು, ಬಳಿಕ ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ಕೂಡ ನೀಡಿತ್ತು.

ಇದೀಗ ಇಬ್ಬರೂ ಅಧಿಕಾರಿಗಳು ವರ್ಗಾವಣೆ ರಾಜ್ಯ ಸರ್ಕಾರ ವಿವಾದಕ್ಕೆ ತಾರ್ಕಿಕ ತೆರೆ ಎಳೆದಿದೆ. ಮೈಸೂರು ಡಿಸಿಯಾಗಿದ್ದ ರೋಹಣಿ ಸಿಂಧೂರಿ ಅವರನ್ನು ಅವರು ಈ ಹಿಂದೆ ಇದ್ದ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಗೌತಮ್ ಬಗಾದಿ ಅವರನ್ನು ನೇಮಕ ಮಾಡಲಾಗಿದೆ.

ಅಂತೆಯೇ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ರನ್ನು ಆರ್ ಡಿಪಿಆರ್ ಇ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಲಕ್ಷ್ನೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಲಾಗಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ