DCM ಡಿಕೆ ಶಿವಕುಮಾರ್ ಕೋಡಿಮಠದ ಶ್ರೀ ಗಳ ಭೇಟಿ,

ಹಾಸನ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೋಡಿಮಠದ ಶ್ರೀಗಳನ್ನು ಭೇಟಿಯಾಗಿದ್ದಾರೆ. ಈ ವೇಳೆ, ಶ್ರೀಗಳು ಏನು ಆಶೀರ್ವಾದ ಮಾಡಿದರು ಎನ್ನುವ ಪ್ರಶ್ನೆಗೆ ಡಿಕೆಶಿ ಮಾರ್ಮಿಕವಾಗಿ ಉತ್ತರಿಸಿದರು. ಮುಖ್ಯಮಂತ್ರಿ ಬದಲಾವಣೆಯ ಕುರಿತು ಇತ್ತೀಚೆಗೆ ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯವನ್ನು ನುಡಿದಿದ್ದರು. ಹಾಲು ಕೆಟ್ಟರೂ, ಹಾಲುಮತ ಸಮುದಾಯ ಕೆಡುವುದಿಲ್ಲ ಎಂದು ಹೇಳಿದ್ದರು. ಅಂದರೆ, ಸಿದ್ದರಾಮಯ್ಯ ಅವರಾಗಿಯೇ ಸಿಎಂ ಕುರ್ಚಿಯಿಂದ ಇಳಿಯಬೇಕು, ಬಲವಂತವಾಗಿ ಅವರನ್ನು ಇಳಿಸಲು ಸಾಧ್ಯವಿಲ್ಲ ಎಂದಿದ್ದರು.

ಹಾಸನ ಜಿಲ್ಲೆ ಅರಸೀಕೆರೆಯ ಕೋಡಿ ಮಠಕ್ಕೆ ಶನಿವಾರ ಭೇಟಿ ನೀಡಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದು, ಶಿವಲಿಂಗ ಅಜ್ಜಯ್ಯ ಗದ್ದುಗೆಗೆ ಪೂಜೆ ಸಲ್ಲಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆ ವೇಳೆ, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ನಾವು ಎಲ್ಲರ ಸಂಸ್ಕೃತಿಗೆ ಬೆಲೆ ಕೊಡುತ್ತೇವೆ ಎಂದು ಹೇಳಿದ್ದಾರೆ.

ನನಗೆ ಧರ್ಮ, ದೇವರು, ಸಂಸ್ಕೃತಿಯ ಬಗ್ಗೆ ನಮ್ಮ ಆಚಾರವಿಚಾರಗಳ ಬಗ್ಗೆ ನಂಬಿಕೆ ಜಾಸ್ತಿ. ಯಾವುದೇ ಧರ್ಮದ ಯಾವುದೇ ಪದ್ಧತಿಗಳು, ತನ್ನದೇ ಆದಂತಹ ಶಕ್ತಿಯನ್ನು ಹೊಂದಿದೆ. ಕೆಲವರು ನಂಬದೇ ಇರಬಹುದು, ಆದರೆ ಇದನ್ನು ನಂಬುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್, ಕೋಡಿಶ್ರೀಗಳನ್ನು ಭೇಟಿಯಾದ ನಂತರ ಹೇಳಿದ್ದಾರೆ.

ಬಹಳ ವರ್ಷದ ನಂತರ ಇಲ್ಲಿಗೆ ಬಂದಿದ್ದೇನೆ, ಕೋಡಿಶ್ರೀಗಳು ಮಠದಲ್ಲೇ ಇದ್ದಾರೆನ್ನುವ ಮಾಹಿತಿ ಸಿಕ್ಕಿತು. ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದವನ್ನು ಪಡೆದುಕೊಂಡು ಬಂದಿದ್ದೇನೆ. ಎಲ್ಲವೂ ಒಳ್ಳೆದಾಗುತ್ತೆ ಎನ್ನುವ ನಂಬಿಕೆಯಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ಇದಕ್ಕೂ ಮುನ್ನ ಅರಸೀಕೆರೆ ಜೇನುಕಲ್ಲು ಸಿದ್ದೇಶ್ವರ ಬೆಟ್ಟದ ಮೆಟ್ಟಿಲುಗಳಿಗೆ ನಂತರ ಜೇನುಕಲ್ಲು ಸಿದ್ದೇಶ್ವರ ದೇಗುಲಕ್ಕೆ ತೆರಳಿ, ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ದರು.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 52 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 38 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 36 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 32 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 41 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 36 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ