ಕೊರೋನಾ ಮರಣ ಮೃದಂಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ!

ಮಂಗಳೂರು: ಕೊರೋನಾ ಮರಣ ಮೃದಂಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ.

ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ನಿನ್ನೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೂವರು ಬಲಿಯಾಗಿದ್ದರು. ಇಂದು ಬಂಟ್ವಾಳದ ಮತ್ತೋರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ.

READ ALSO

ಬಂಟ್ವಾಳದ ಕಲ್ಲಡ್ಕ ನಿವಾಸಿ ಸುಮಾರು 49 ವರ್ಷದ ವ್ಯಕ್ತಿ ಮೃತಪಟ್ಟವರು. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇಂದು 49 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇದೀಗ ಅವರ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯಲ್ಲಿ ಕೋವಿಡ್-19 ಇರುವುದು ದೃಢಪಟ್ಟಿದೆ.