ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟ: ವಿಮಾನ ನಿಲ್ದಾಣ ಸೇರಿದಂತೆ ಹಲವೆಡೆ ಹೈ ಅಲರ್ಟ್ ಘೋಷಣೆ!

ದೆಹಲಿ: ದೆಹಲಿಯ ಇಸ್ರೇಲ್ ರಾಭಾರಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟಕ್ಕ ಹಲವು ವಾಹನಗಳು ಜಖಂ ಗೊಂಡಿದೆ. ಅದೃಷ್ಠವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ದೆಹಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಇದೀಗ ಎಲ್ಲಾ ವಿಮಾನ ನಿಲ್ದಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟದಿಂದಾಗಿ 4-5 ವಾಹನ ಡ್ಯಾಮೇಜ್ ಆಗಿದೆ

READ ALSO

ವಿಮಾನ ನಿಲ್ದಾಣ, ಸರ್ಕಾರಿ ಕಚೇರಿ, ಪ್ರಮುಖ ತಾಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದೆಹಲಿ ಸುತ್ತಮುತ್ತ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲಾಗಿದೆ. ಪ್ರತಿ ವಾಹನಗಳ ತಪಾಸನೆ ನಡೆಯುತ್ತಿದೆ. ಎಲ್ಲಾ ರಾಜ್ಯ ಹಾಗೂ ನಗರಗಳಲ್ಲಿ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚಿಸಲಾಗಿದೆ.

ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಸ್ರೇಲ್ ಕಚೇರಿ ಕಟ್ಟದ ಬಳಿ ಬಾಂಬ್ ಸ್ಫೋಟಗೊಂಡಿದೆ. ಈ ಕುರಿತು ತನಿಖೆ ಪ್ರಗತಿಯಲ್ಲಿದೆ.