ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ.

ರಾಜ್ಯದಲ್ಲಿ ಡೆಂಗ್ಯೂವಿನ ಆರ್ಭಟ ಜೋರಾಗಿದೆ. ಡೆಂಗ್ಯೂ ಹೆಸರೇ ಹೇಳುವಂತೆ ಭಯಾನಕ ಕಾಯಿಲೆಯಾಗಿದ್ದು, ಒಮ್ಮೆ ದೇಹದೊಳಗೆ ಒಕ್ಕರಿಸಿಕೊಂಡು ಬಿಟ್ಟರೆ ದೇಹದ ಶಕ್ತಿಯನ್ನು ಕುಗ್ಗಿಸಿ ಬಿಡುತ್ತವೆ. ಈ ಡೆಂಗ್ಯೂ ಜ್ವರವೂ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಪ್ರಾರಂಭದಲ್ಲಿಯೇ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆಯೇ ಹೆಚ್ಚು.

ರಾಷ್ಟ್ರೀಯ ಡೆಂಗ್ಯೂ ದಿನದ ಇತಿಹಾಸ ಹಾಗೂ ಮಹತ್ವ: ರಾಷ್ಟ್ರೀಯ ಡೆಂಗ್ಯೂ ದಿನವು ಭಾರತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಯೋಜನೆಯಾಗಿದ್ದು, ಡೆಂಗ್ಯೂ ವಿರೋಧಿ ದಿನ ಅಥವಾ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಪ್ರತಿ ವರ್ಷ ಮೇ 16 ರಂದು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ರೋಗ, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಈ ದಿನದಂದು ಡೆಂಗ್ಯೂ ತಡೆಗಟ್ಟುವ ಬಗೆಗಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಡೆಂಗ್ಯೂ ರೋಗ ಹೇಗೆ ಬರುತ್ತದೆ? ಭಾರತದಲ್ಲಿ ಪ್ರತಿ ವರ್ಷ ಡೆಂಗ್ಯೂ ರೋಗಕ್ಕೆ ತುತ್ತಾಗುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಡೆಂಗ್ಯೂ ವೈರಸ್‌ನಿಂದ ಉಂಟಾಗುವ ವೈರಲ್ ಕಾಯಿಲೆಯಾಗಿದೆ. ಸಾಂಕ್ರಾಮಿಕ ರೋಗವಾಗಿರುವ ಡೆಂಗ್ಯೂ ಈಡೀಸ್‌ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಕಚ್ಚಿದ 3-14 ದಿನಗಳ ನಂತರ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ರೋಗ ಕಕಾಣಿಸಿಕೊಂಡ ತಕ್ಷಣವೇ ಸರಿಯಾದ ಚಿಕಿತ್ಸೆ ಪಡೆದುಕೊಂಡರೆ ರೋಗದಿಂದ ಗುಣಮುಖರಾಗಬಹುದು.

ಡೆಂಗ್ಯೂವಿನ ರೋಗಲಕ್ಷಣಗಳೇನು?

ಜ್ವರ ವಾಂತಿವಾಕರಿಕೆ ದದ್ದುಗಳು ವಿಪರೀತವಾದ ಮೈ ಕೈ ನೋವು, ಕೀಲು ನೋವು, ತಲೆನೋವು ಈ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಡೆಂಗ್ಯೂ ಚಿಕಿತ್ಸೆ ಹೇಗೆ: ಸೋಂಕಿತ ವ್ಯಕ್ತಿಯಲ್ಲಿ ವಿಪರೀತ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಬೇಕು. ಅದಲ್ಲದೇ ಈ ಡೆಂಗ್ಯೂ ಕಾಯಿಲೆ ಬಂದ ವ್ಯಕ್ತಿಯು ವಿಶ್ರಾಂತಿ ತೆಗೆದುಕೊಳ್ಳುವುದು ಅವಶ್ಯಕ. ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಹಣ್ಣಿನ ಜ್ಯೂಸ್ ಕುಡಿಯುತ್ತಿರಬೇಕು. ಜ್ವರ ಕಡಿಮೆಯಾಗಲು ಪ್ಯಾರಸಿಟಮಾಲ್ ಮಾತ್ರೆಯೇ ಮುಖ್ಯವಾದ ಔಷಧ. ಅದರೊಂದಿಗೆ ಪಪ್ಪಾಯಿ ಹಾಗೂ ಕೀವಿ ಹಣ್ಣುಗಳ ಸೇವನೆಯಿಂದ ರೋಗವನ್ನು ಗುಣಪಡಿಸಿಕೊಳ್ಳಬಹುದು.

ಮುನ್ನೆಚ್ಚರಿಕೆ ಕ್ರಮಗಳು: ಏಡಿಸ್ ಈಜಿಪ್ಟಿ ಸೊಳ್ಳೆಗಳು ಹೂಕುಂಡಗಳು, ನೀರಿನ ತೊಟ್ಟಿಗಳು, ಟೈರ್ ಗಳಲ್ಲಿ ಸಂತಾನೋತ್ಪತ್ತಿಯನ್ನು ಮಾಡುತ್ತವೆ. ಹೀಗಾಗಿ ಕುಂಡಗಳು, ಟೈರ್‌ಗಳು ಮತ್ತಿತರ ವಸ್ತುಗಳನ್ನು ಸ್ವಚ್ಛಗೊಳಿಸಬೇಕು. ಮನೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಮಾಡುವ ಮೂಲಕ ಸೊಳ್ಳೆಗಳನ್ನು ನಿಯಂತ್ರಿಸಬಹುದಾಗಿದೆ.

Spread the love
 • Related Posts

  ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ

  ನವದೆಹಲಿ: ನರೇಂದ್ರ ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಅಂದರೆ ಕರ್ನಾಟಕದಿಂದ ಆಯ್ಕೆಯಾದ ಎನ್‌ಡಿಎ ಸಂಸದರ ಪೈಕಿ ಹೆಚ್‌ಡಿ ಕುಮಾರಸ್ವಾಮಿ ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ…

  Spread the love

  ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರ ದಾಳಿ

  ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಶಿವಖೋರಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್ ಮೇಲೆ ಭಯೋತ್ಪಾದಕರು ಭಾನುವಾರ ದಾಳಿ ನಡೆಸಿದ್ದಾರೆ. ಈ ಘಟನೆಯ ಅನೇಕ ಸಾವುನೋವುಗಳು ಸಂಭವಿಸುವ ಸಾಧ್ಯತೆ ಇದೆ. ಆರಂಭಿಕ ವರದಿಗಳನ್ನು ಉಲ್ಲೇಖಿಸಿ, ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ…

  Spread the love

  Leave a Reply

  Your email address will not be published. Required fields are marked *

  You Missed

  ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ

  • By admin
  • June 9, 2024
  • 4 views
  ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ

  ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರ ದಾಳಿ

  • By admin
  • June 9, 2024
  • 5 views
  ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರ ದಾಳಿ

  ಉಜಿರೆಯ ಕಾಲೇಜು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ 3.14ಲಕ್ಷ ನಗದು ನಾಪತ್ತೆ!!!

  • By admin
  • May 26, 2024
  • 6 views
  ಉಜಿರೆಯ ಕಾಲೇಜು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ 3.14ಲಕ್ಷ ನಗದು ನಾಪತ್ತೆ!!!

  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ,ಡಿ.ಸಿಎಂ ಭೇಟಿ

  • By admin
  • May 25, 2024
  • 9 views
  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ,ಡಿ.ಸಿಎಂ ಭೇಟಿ

  ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರಿಗೆ ಜಾಮೀನಿನಲ್ಲಿ ಬಿಡುಗಡೆ

  • By admin
  • May 22, 2024
  • 10 views
  ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರಿಗೆ ಜಾಮೀನಿನಲ್ಲಿ ಬಿಡುಗಡೆ

  ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾದ ಶಾಸಕ ಹರೀಶ್ ಪೂಂಜಾ

  • By admin
  • May 22, 2024
  • 11 views
  ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾದ ಶಾಸಕ ಹರೀಶ್ ಪೂಂಜಾ