ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ದಂತ‌ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮುಂಡಾಜೆ: ರಾಷ್ಟ್ರೀಯ ಆರೋಗ್ಯ ಮಿಷನ್; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ; ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ; ಬೆಳ್ತಂಗಡಿ ತಾಲೂಕು ಆರೋಗ್ಯ ಕಛೇರಿ; ಎ.ಬಿ. ಶೆಟ್ಟಿ ದಂತವೈದ್ಯಕೀಯ ಕಾಲೇಜು, ದೇರಳಕಟ್ಟೆ; ಸೇವಾಭಾರತಿ (ರಿ.) ಕನ್ಯಾಡಿ, ಬೆಳ್ತಂಗಡಿ ತಾಲೂಕು; ವಿವೇಕಾನಂದ ವಿದ್ಯಾಸಂಸ್ಥೆ ಆಡಳಿತ ಮಂಡಳಿ; ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ, ಕಡಿರುದ್ಯಾವರ; ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ, ಕಾನರ್ಪ, ಕಡಿರುದ್ಯಾವರ; ಮಹಮ್ಮಾಯಿ ಸೇವಾ ಸ್ಪಂದನ, ಕಡಿರುದ್ಯಾವರ ಇವುಗಳ ಜಂಟಿ ಆಶ್ರಯದಲ್ಲಿ ದಿನಾಂಕ 10-01-2022ನೇ ಸೋಮವಾರ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆ ಇಲ್ಲಿ ಉಚಿತ ದಂತ‌ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಸಲಾಯಿತು.

ಈ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾ ಸಂಸ್ಥೆ ಮುಂಡಾಜೆ ಇದರ ಅಡಳಿತ ಮಂಡಳಿಯ ನಿರ್ದೇಶಕರಾದ ಶ್ರೀ ವಿಶ್ವನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು, ದಕ್ಷಿಣ ಕನ್ನಡ ಜಿಲ್ಲಾ ಎನ್.ಓ.ಹೆಚ್.ಪಿ ಯೋಜನಾಧಿಕಾರಿ ಗಳಾದ ಡಾ| ಲವೀನಾ ಹಾಗೂ ದೇರಳ ಕಟ್ಟೆ ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜಿನ ಸಮುದಾಯ ಶಿಬಿರಾಧಿಕಾರಿಗಳಾದ ಡಾ| ಶಿಲ್ಪಾ ಇವರುಗಳು ದೀಪ ಪ್ರಜ್ವಲಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸೇವಾಭಾರತಿ (ರಿ.) ಕನ್ಯಾಡಿ ಇದರ ಅಧ್ಯಕ್ಷರಾದ ಶ್ರೀ ವಿನಾಯಕ ರಾವ್ ಕನ್ಯಾಡಿ ಅವರ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಉಪ್ಪಿನಂಗಡಿ ಅರೋಗ್ಯ ಕೇಂದ್ರದ ದಂತ ವೈದ್ಯರಾದ ಡಾ. ಹುಸೇನ್ ಮುಷಾಕಿರ್ ಅವರು ದಂತ ಅರೋಗ್ಯ ರಕ್ಷಣೆ ಕುರಿತು ಹಾಗೂ ಅಗತ್ಯತೆಯನ್ನು ಸಾರ್ವಜನಿಕರಿಗೆ ತಿಳಿಸಿ ಶಿಬಿರದ ಸದುಪಯೋಗವನ್ನು ಮಾಡಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ‌ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಜೋಲಿ ‌ಓ ಐ, ಚಿರಂಜೀವಿ ಯುವಕ ಮಂಡಲದ ಅದ್ಯಕ್ಷರಾದ ಶ್ರೀ ಜನಾರ್ದನ ಕಾನರ್ಪ , ಮಹಾಮ್ಮಾಯಿ ಸೇವಾ ಸ್ಪಂದನ ಕಡಿರುದ್ಯಾವರದ ಪ್ರಮುಖರಾದ ಶ್ರೀ ದೀಕ್ಷಿತ್ ಹೆಚ್ ಉಪಸ್ಥಿತಿರಿದ್ದರು. ವಿವೇಕಾನಂದ ವಿದ್ಯಾ ಸಂಸ್ಥೆ ಯ ಅಡಳಿತ ಮಂಡಳಿಯ ನಿರ್ದೇಶಕರಾದ ಶ್ರೀಮತಿ ಭಾರತಿ ಫಡ್ಕೆ ಅವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ಉಪನ್ಯಾಸಕಿ ಶ್ರೀಮತಿ ವಸಂತಿ ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು ಹಾಗೂ
ರಾಜ್ಯ ಶಾಸ್ತ್ರ ಉಪನ್ಯಾಸಕರಾದ ಶ್ರೀ ಸುಬಾಶ್ಚಂದ್ರ ಜೈನ್ ವಂದಿಸಿದರು.

Spread the love
  • Related Posts

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ಸಕಲೇಶಪುರ: ಬೆಂಗಳೂರು ಮಂಗಳೂರು ಸಂಪರ್ಕರಸ್ತೆಯ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ.…

    Spread the love

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    You Missed

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 36 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 170 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 82 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 281 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 192 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 114 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು