ರಾಷ್ಟ್ರೀಯ ಆರೋಗ್ಯ ಮಿಷನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ, ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ, ಬೆಳ್ತಂಗಡಿ ತಾಲೂಕು ಆರೋಗ್ಯ ಕಛೇರಿ, ಎ.ಬಿ. ಶೆಟ್ಟಿ ದಂತವೈದ್ಯಕೀಯ ಕಾಲೇಜು, ದೇರಳಕಟ್ಟೆ, ಸೇವಾಭಾರತಿ (ರಿ.) ಕನ್ಯಾಡಿ, ಬೆಳ್ತಂಗಡಿ ತಾಲೂಕು, ವಿವೇಕಾನಂದ ವಿದ್ಯಾಸಂಸ್ಥೆ ಆಡಳಿತ ಮಂಡಳಿ; ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ, ಕಡಿರುದ್ಯಾವರ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ, ಕಾನರ್ಪ, ಕಡಿರುದ್ಯಾವರ; ಮಹಮ್ಮಾಯಿ ಸೇವಾ ಸ್ಪಂದನ, ಕಡಿರುದ್ಯಾವರ ಇವುಗಳ ಜಂಟಿ ಆಶ್ರಯದಲ್ಲಿ ಇದೇ ಬರುವ ದಿನಾಂಕ 10-01-2022 ನೇ ಸೋಮವಾರ ಬೆಳಿಗ್ಗೆ ಗಂಟೆ 9.00 ರಿಂದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆ ಇಲ್ಲಿ ಉಚಿತ ದಂತ (ಹಲ್ಲು) ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ.
ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…