ಅಯೋಧ್ಯೆ ಭೂಮಿ ಪೂಜೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಯವರಿಂದ ಶುಭ ಹಾರೈಕೆ

ಬೆಳ್ತಂಗಡಿ: ಆಗಸ್ಟ್ 5 ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಐತಿಹಾಸಿಕ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶುಭ ಕೋರಿದ್ದಾರೆ.

Virendra Hegde wishes Ayodhya puja

ಡಾ.ಡಿ.ವೀರೇಂದ್ರ ಹೆಗ್ಗಡೆಯವರು

ರಾಮ ತನ್ನ ಸದ್ಗುಣಗಳಿಂದ ಆದರ್ಶ ಪುರುಷ ಎನಿಸಿಕೊಂಡಿದ್ದಾನೆ. ಸಹಸ್ರಾರು ವರ್ಷಗಳಿಂದ ಆತನನ್ನು ಮರ್ಯಾದಾ ಪುರುಷೋತ್ತಮ ಎಂದು ಕರೆಯಲಾಗಿದೆ. ಈಚೆಗೆ ‘ರಾಮಾಯಣ’ ದೂರದರ್ಶನದಲ್ಲಿ ಪ್ರಸಾರವಾದಾಗ ಕೋಟ್ಯಂತರ ಜನರು ವೀಕ್ಷಿಸಿದ್ದಾರೆ. ರಾಮನ ಕಥೆ, ಆದರ್ಶಗಳು ಸಹಸ್ರ ವರ್ಷಗಳವರೆಗೆ ಈ ನೆಲದಲ್ಲಿ ಉಳಿಯುತ್ತದೆ ಎಂದು ಹೇಳಿದ್ದಾರೆ.

ರಾಮರಾಜ್ಯದ ಕಲ್ಪನೆಗೆ ಕೇಂದ್ರವಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಅತೀ ಅಗತ್ಯ. ಈ ಶಿಲಾನ್ಯಾಸದ ಶುಭ ಮೂಹೂರ್ತದಲ್ಲಿ ಪ್ರಾರಂಭವಾಗಿರುವ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂದು ಅವರು ಪ್ರಾರ್ಥಿಸಿದರು.

ಕೆಲವೇ ತಿಂಗಳ ಹಿಂದೆ ಅಯೋಧ್ಯೆಗೆ ತೆರಳಿ ಪವಿತ್ರ ಭೂ ಸ್ಪರ್ಶ ಮಾಡಿ, ಹಿರಿಯ ಸಂತರಿಗೆ ಗೌರವ ಸಲ್ಲಿಸಿ ಬಂದಿದ್ದೇನೆ. ಈ ಸಾಧನೆಗೆ ಸಂಕಲ್ಪ ಮಾಡಿದ ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಶ್ರದ್ಧಾಳುಗಳಿಗೂ ಅಭಿನಂದನೆಗಳು ಎಂದರು.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 35 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 94 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 215 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 39 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 28 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 24 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ