ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಡಿ ಅತ್ಯಾಕರ್ಷಕ ವಿನ್ಯಾಸ ಹಾಗೂ ವೈಜ್ಞಾನಿಕವಾಗಿ ರೂಪಿತವಾದ 10 ಸಾವಿರ ಆಸನ ಸಾಮರ್ಥದ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಜ. 7ರಂದು ಉದ್ಘಾಟನೆಗೊಳ್ಳಲಿದೆ.
• ಶ್ರೀ ಸಾನ್ನಿಧ್ಯದೊಳಗೆ ಆರಾಮದಾಯಕ ಆಸನದ ವ್ಯವಸ್ಥೆ ಉಪಾಹಾರ, ವೃದ್ಧರು, ಅಂಗವಿಕಲರು, ಮಕ್ಕಳ ಆರೈಕೆ ಕೇಂದ್ರ, ವೈದ್ಯಕೀಯ ನೆರವು, ಟಿವಿ ಸಹಿತ ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ದರ್ಶನದ ಸಮಯ, ಕ್ಷೇತ್ರದ ವಿವಿಧ ಸೇವೆಗಳ ವಿವರಗಳು ಲಭ್ಯವಾಗುವಂತೆ ಡಿಜಿಟಲ್ ತಂತ್ರಜ್ಞಾನ ಅಳವಡಿಸಲಾಗಿದೆ.
• ಯಾರಾದರೂ ತಪ್ಪಿ ಹೋದರೆ ಅಥವಾ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರೂ ಅವರನ್ನು ಗುರುತಿಸುವ ತಂತ್ರಜ್ಞಾನ ಇಲ್ಲಿದೆ.
•10 ಸಾವಿರ ಆಸನ ವ್ಯವಸ್ಥೆ ಡಿಜಿಟಲ್ ತಂತ್ರಜ್ಞಾನದ ಮಾಹಿತಿ, ವಿಶ್ರಾಂತಿ, ಶೌಚಾಲಯ ವ್ಯವಸ್ಥೆ ಹವಾನಿಯಂತ್ರಿತ ಕೊಠಡಿಗಳು
•ಸಾಂಪ್ರದಾಯಿಕ ಮತ್ತು ಆಧುನಿಕ ವಾಸ್ತುಶಿಲ್ಪದೊಂದಿಗೆ ನಿರ್ಮಾಣಗೊಂಡ ಈ ಸಂಕೀರ್ಣ 2.75 ಲಕ್ಷ ಚದರ
•ಅಡಿ ವಿಸ್ತೀರ್ಣ ಹೊಂದಿದೆ ವಿಶಿಷ್ಟ ಕಲಾಕೃತಿಗಳೂ ಇವೆ. ಕಟ್ಟಡಕ್ಕೆ ಸಂಪೂರ್ಣ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಲಾಗಿದೆ.
ಉಪ ರಾಷ್ಟ್ರಪತಿಗಳಿಂದ ಉದ್ಘಾಟನೆ ಜ.7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಡಾ| ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಕೀರ್ಣವನ್ನು ಉದ್ಘಾಟಿಸುವರು.
ಉಪ ರಾಷ್ಟ್ರಪತಿಗಳ ಪತ್ನಿ ಡಾ।ಸುದೇಶ್ ಧನ್‌ಕರ್ ಮುಖ್ಯ ಅತಿಥಿಗಳಾಗಿರುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹೇಮಾವತಿ ವೀ. ಹೆಗ್ಗಡೆ, ಸಂಸದ ಕ್ಯಾ।। ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಡಿ.ಹರ್ಷೇಂದ್ರ ಕುಮಾರ್, ಎಸ್.ಕೆ.ಡಿ.ಆರ್.ಡಿ.ಪಿ. ಸಿಇಒ ಅನಿಲ್ ಕುಮಾರ್ ಎಸ್.ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.