ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು.

ಬಳಿಕ ಎಲ್ಲರೂ ಸಾಮೂಹಿಕವಾಗಿ “ಓಂ ನಮಃ ಶಿವಾಯ” ಪಠಣ ಮಾಡಿದರು.ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿ ಧನ್ಯತೆಯನ್ನು ಹೊಂದಿರುವಿರಿ.ನಿಮ್ಮ ಎಲ್ಲಾ ಕಷ್ಟಗಳನ್ನು ಶಿವನಿಗೆ ಅರ್ಪಿಸಿ, ಸುವಿಚಾರಗಳನ್ನು ಮಾತ್ರ ಕೊಂಡು ಹೋಗಿ. ವಿಷಕಂಠನಾದ ಶಿವನಿಗೆ ಮಾತ್ರ ಹಾಲಾಹಲ ಸ್ವೀಕರಿಸುವ ಸಾಮರ್ಥ್ಯವಿದೆ. ನನಗೆ ಎಂದು ವೈಯಕ್ತಿಕವಾಗಿ ಸುಖಕ್ಕಾಗಿ ಪ್ರಾರ್ಥಿಸುವ ಬದಲು ನಮಗೆ, ಇಡಿ ಸಮಾಜಕ್ಕೆ ಕಲ್ಯಾಣವಾಗಲಿ ಎಂಬ ಪ್ರಾರ್ಥನೆ ನಿಮ್ಮದಾಗಲಿ ಎಂದು ಹೇಳಿ ಅವರು ಶುಭಹಾರೈಸಿದರು.

ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಮತ್ತು ಮರಿಯಪ್ಪನವರ ನೇತೃತ್ವದಲ್ಲಿ ಏಳು ಮಂದಿಯೊಂದಿಗೆ ಪ್ರಾರಂಭವಾದ ಪಾದಯಾತ್ರೆ ಇಂದು ಎಪ್ಪತ್ತು ಸಾವಿರ ಮಂದಿ ಪಾದಯಾತ್ರಿಗಳು ಬೆಂಗಳೂರು ಮತ್ತು ಮೊದಲಾದ ಕಡೆಗಳಿಂದ ಶನಿವಾರ ಧರ್ಮಸ್ಥಳಕ್ಕೆ ಬಂದಿದ್ದರು.ಎಲ್ಲರಿಗೂ ಶ್ರೀ ಸ್ವಾಮಿಯ ದರ್ಶನ, ಸೇವೆಯ ಫಲ ದೊರೆತು ಲೋಕಕಲ್ಯಾಣವಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರಕುಮಾ‌ರ್, ಸುಪ್ರಿಯಾಹರ್ಷೇಂದ್ರಕುಮಾ‌ರ್ ಉಪಸ್ಥಿತರಿದ್ದು ಶಿವಪಂಚಾಕ್ಷರಿ ಪಠಣದಲ್ಲಿ ಭಾಗವಹಿಸಿದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಮರಿಯಪ್ಪ ಕೂಡಾ ಉಪಸ್ಥಿತರಿದ್ದರು.

Spread the love
  • Related Posts

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಸಕಲೇಶಪುರ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಬೆಟ್ಟದ ಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಇನ್ನು ಮುಂದೆ ಫೋಟೋ ಶೂಟ್ ಮಾಡಲು 4 ಗಂಟೆಗೆ ₹5,000 ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ತಿಳಿಸಿದರು. ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಿ…

    Spread the love

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 31ರಂದು ಬೈಂದೂರು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ…

    Spread the love

    You Missed

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    • By admin
    • April 2, 2026
    • 21 views
    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    • By admin
    • April 1, 2026
    • 17 views
    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    • By admin
    • April 1, 2026
    • 36 views
    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    • By admin
    • April 1, 2026
    • 42 views
    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    • By admin
    • April 1, 2026
    • 28 views
    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    • By admin
    • March 31, 2026
    • 290 views
    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ