ದರ್ಶನ್ ಮತ್ತು ಸಹಚರರು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ; ದಾಸ ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ವಿಷಯಗಳು ಪೋಟೋಗಳ ಮೂಲಕ ವೈರಲ್ ಆಗುತ್ತಿದ್ದಂತೆ, ಎಚ್ಚೆತ್ತುಕೊಂಡಿರುವಂತ ಕಾರಾಗೃಹ ಇಲಾಖೆಯು, ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರಿ ಕೋರ್ಟ್ ಮೊರೆ ಹೋಗಿತ್ತು. ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ ಕಾರಣ, ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡುತ್ತಿದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಸರ್ಕಾರ ಕಾರಾಗೃಹ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಪ್ರಕರಣದಲ್ಲಿ ಹೊಣೆ ಮಾಡಿ ಅಮಾನತುಗೊಳಿಸಿತ್ತು.

ಈ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವ ಸಂಬಂಧ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಯಾಗಿರುವಂತ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಇಂದು ಅಥವಾ ನಾಳೆ ಶಿಫ್ಟ್ ಮಾಡಲಿದೆ.

Spread the love
  • Related Posts

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ…

    Spread the love

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ, ಹಲವೆಡೆ ಜಲಾವೃತ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ