ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಹದಡಿ ಬೈಪಾಸ್‌ನಲ್ಲಿ ಶನಿವಾರ ನಡೆದಿದೆ.
ಕಾರು ಲಾರಿಯ ಡಿಸೇಲ್ ಟ್ಯಾಂಕಿಗೆ ಹೊಡೆದಿದ್ದರಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟರು. ಗಾಯಾಳು ಚಾಲಕನನ್ನು ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುದ್ದಾರೆ.