ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಲಂವತಿಗೆ ಗ್ರಾಮದ ದಿಡುಪೆಯ ಸುಧೀರ್ (26) ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ದಿಡುಪೆಯ ಮೂವರುಗಳು ಸೇರಿ ಸುಧೀರನ್ನು ಅಡ್ಡಗಟ್ಡಿ ರಾಡ್, ಕಲ್ಲು ಮತ್ತಿತರ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡ ಸುಧೀರ್ ನನ್ನು ಸ್ಥಳೀಯ ಯವಕರು ಸೇರಿ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಧೀರ್ ಇಂದು ರಾತ್ರಿ ತನ್ನ ಮನೆಯಿಂದ ಮೆಹಂದಿ ಕಾರ್ಯಕ್ರಮಕ್ಕೆ ದಾರಿಯಲ್ಲಿ ಹೋಗುತ್ತಿದ್ದಾಗ ಮೂವರು ಸೇರಿ ಏಕಾಏಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ, ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.