ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ

ದಿಡುಪೆ: ಮಲವಂತಿಗೆ ದಿಡುಪೆ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಬೆಳಗ್ಗೆ 7.30 ಕ್ಕೆ ಸರಿಯಾಗಿ ದಿಡುಪೆಯಿಂದ ಸುಮಾರು 2.5k ದೂರದಲ್ಲಿರುವ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಜಕ್ಕೆ, ಮಲವಂತಿಗೆ ಈ ಭಾಗಕ್ಕೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕ ಗ್ರಾಮಸ್ಥರ ಅನುಕೂಲಕ್ಕಾಗಿ ಬಸ್ಸ್ ಸೌಲಭ್ಯ ಒದಗಿಸಲು ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಬಂದ ಮನವಿಗೆ ಬೆಳ್ತಂಗಡಿ ಶಾಸಕರು ಹಾಗೂ ರಸ್ತೆ ಸಾರಿಗೆ ಸಂಸ್ಥೆಯು ಸ್ವಂಪಂದಿಸಿ ಕಜಕ್ಕೆ ಭಾಗಕ್ಕೆ ಬಸ್ ಬಿಡಲು ಮುಂದಾಗಿದ್ದು ಸ್ಥಳೀಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಇವರು ಮೂಲಕ ಚಾಲನೆ ನೀಡಿದರು.

ಈ ರಸ್ತೆ ಸಾರಿಗೆ ಸಂಪರ್ಕ ವಿಸ್ತರಣೆ ವ್ಯವಸ್ಥೆಗೆ ದಿನಾಂಕ 01/07/2024 ರಂದು ಮಾನ್ಯ ಶಾಸಕರಾದ ಹರೀಶ್ ಪೂಂಜ KSRTC ಜನಸ್ಪಂದನಾ ಕಾರ್ಯಕ್ರಮ ಏರ್ಪಡಿಸಿದ್ದರು, ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮದ ಗ್ರಾಮದ ಅಭಿವೃದ್ಧಿಯ ಉದ್ದೇಶದಿಂದ ತಮ್ಮ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಜಕ್ಕೆ ಮಲವಂತಿಗೆ ಇದ್ದು,ಇಲ್ಲಿ ಸುಮಾರು 100 ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಅದಲ್ಲದೆ ವಿವಿಧ ರೀತಿಯ ಚಟುವಟಿಕೆಯಲ್ಲಿ ಹಾಗೂ ಉತ್ತಮ ಶಾಲೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಂತ ವಿದ್ಯಾಸಂಸ್ಥೆಯಾಗಿದ್ದು, ಅದಲ್ಲದೆ ಮಲವಂತಿಗೆ ಮತ್ತು ಮಿತ್ತಬಾಗಿಲು ಕೇವಲ 2 ಗ್ರಾಮದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಇಲ್ಲಿಯವರೆಗೆ ರಸ್ತೆ ಇದ್ದರೂ ಕೂಡ ಮೂಲಭೂತ ಸೌಕರ್ಯದ ಕೊರತೆಯಿಂದ ಸುಮಾರು 2.5km ನಡೆದುಕೊಂಡು ಹೋಗುವ ಪರಿಸ್ಥಿತಿ ಸುಮಾರು ವರ್ಷಗಳಿಂದ ನಡೆಯುತ್ತಿತ್ತು, ಸುಮಾರು 250 ಕ್ಕೂ ಅಧಿಕ ಮನೆಗಳಿದ್ದು ಅಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತುಂಬಾ ಅನುಕೂಲ ಆಗುವಂತೆ KSRTC ಪುತ್ತೂರು ವಿಭಾಗ ಕ್ಕೆ ಹಾಗೂKSRTC ಧರ್ಮಸ್ಥಳ ವಿಭಾಗಕ್ಕೆ ಹಾಗೂ ಮಾನ್ಯ ಶಾಸಕರಿಗೆ ಜುಲೈ 01.2024 ರಂದು KSRTC ಜನಸ್ಪಂದನಾ ಸಭೆಯ ಮೂಲಕ ಗ್ರಾಮಸ್ಥರ ಪರವಾಗಿ ನೀಡಿದ ಮನವಿಗೆ ಸ್ಪಂದಿಸಿ. ಬಸ್ ಸಂಚಾರ ವಿಸ್ತರಣೆ ಅನುಕೂಲ ಆಯಿತು.ಇಂದು ಬೆಳಗ್ಗೆ 7.30ಕ್ಕೆ ಸರಿಯಾಗಿ ಎರಡು KSRTC ಬಸ್ ಗಳನ್ನು ದಿಡುಪೆಯಿಂದ ಕಜಕ್ಕೆ ಭಾಗಕ್ಕೆ ವಿಶೇಷ ರೀತಿಯಲ್ಲಿ ಪುಟ್ಟ ವಿದ್ಯಾರ್ಥಿಗಳೊಂದಿಗೆ ಗ್ರಾಮಸ್ಥರು ಸೇರಿ ಹೂವಿನ ಅಲಂಕಾರ ಪುಷ್ಪಾರ್ಚನೆ ಹಾಗೂ ಸಿಹಿ ತಿಂಡಿ ಹಂಚಿ ಸ್ವಾಗತಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು . ಕರ್ನಾಟಕ ಸಾರಿಗೆ ವ್ಯವಸ್ಥೆಯ ಸಿಬ್ಬಂದಿ ವರ್ಗದವರಾದ ನಾರಾಯಣ ಪೂಜಾರಿ ಮುಂಡಾಜೆ ಹಾಗೂ ಚಾಲಕರು ಮತ್ತು ನಿರ್ವಾಹಕರಾದ ವಿನಾಯಚಂದ್ರ, ಕರುಣಾಕರ, ಮತ್ತು ದಯಾನಂದ ಇವರು ಉಪಸ್ಥಿರಿದ್ದರು. ಹಾಗೂ ಬಂಗಾಡಿ CA ಬ್ಯಾಂಕ್ ನಿರ್ದೇಶಕರಾದ ಕೇಶವ ಎಂ.ಕೆ, ಹಾಲು ಉತ್ಪಾದಕರ ಸಹಕಾರಿ ಸಂಘ ಮಲವಂತಿಗೆ ಅಧ್ಯಕ್ಷರಾದ ನಾರಾಯಣ ಗೌಡ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷರಾದ ತೀಕ್ಷಿತ್ ಕೆ.ಕಲ್ಬೆಟ್ಟುಶ್ರೀ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಪೂಜಾರಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆಯ ಶಿಕ್ಷಕರಾದ ರಂಗನಾಥ ಮತ್ತು ಪರಮೇಶ್ವರ್ SDMC ಅಧ್ಯಕ್ಷರಾದ ಶೇಖರ ಗೌಡ ಪೊದ್ಕೆತರುಹಾಗೂ ಗ್ರಾಮಸ್ಥರಾದ ಮಧುಸೋದನ್ ಮಲ್ಲ, ಶೇಕರ ಗೌಡ ಹೊಳೆಕೆರೆ, ರಾಧಾಕೃಷ್ಣ ಗೌಡ ಮಜಲು,ರಮೇಶ್ ಗೌಡ ವಿದ್ಯಾನಗರ,ಸಚಿನ್ ಗೌಡ ಬದ್ಲಾಯಿ, ಶ್ರೀ ಹರಿ ಭಟ್ ಕಾರ್ಯದರ್ಶಿ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ಸಂಜೀವ ಗೌಡ ಪುನ್ಕೆದಡಿ, ರಮೇಶ್ ಗೌಡ,ಸಂಪತ್ ಪೂಜಾರಿ ಕಜಕ್ಕೆ,ಸಾಗರ್ ಅಡ್ಡಕೊಡಂಗೆ, ರಾಜೇಶ್ ಗೌಡ ಬರ್ಕಲಟ್ಟುಗ್ರಾಮಸ್ಥರು ಹಾಗೂ ಕಜಕ್ಕೆ ಶಾಲೆ ಪುಟಾಣಿಗಳು,ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯಸ್ಥರಾದ ಉಮೇಶ್ ಗೌಡ ಸ್ವಾಗತಿಸಿ, ಮತ್ತು ಶ್ರೀ ವಿದ್ಯಾಗಣಪತಿ ಸೇವೆ ಸಮಿತಿಯ ಕಾರ್ಯದರ್ಶಿಗಳಾದ ಜಯಂತ ಹೆಗ್ಡೆ ಇವರು ವಂದನಾರ್ಪಣೆ ಮಾಡಿದರು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 18 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್