ಸಾರಿಗೆ ಸಚಿವರ ಖಾಸಗಿ ಕಾರಿಗೆ ಸಾರಿಗೆ ಬಸ್​ ಡಿಪೋದಲ್ಲಿನ ಬಂಕ್​ನಿಂದ ಡಿಸೇಲ್ ಪೂರೈಕೆ! ಇದೀಗ ಡಿಸೇಲ್ ತುಂಬಿದ ಸಿಬ್ಬಂದಿಗೆ ಸಂಕಷ್ಟ! ಯಾರದೋ ತಪ್ಪಿಗೆ ಯಾರಿಗೋ ಶಿಕ್ಷೆ ಏನಿದು ಅವಾಂತರ ಸಾರಿಗೆ ಸಚಿವರೇ!

ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಸಾರಿಗೆ ಬಸ್​ ಡಿಪೋದಲ್ಲಿನ ಬಂಕ್​ನಿಂದಲೇ ಶುಕ್ರವಾರ ಡೀಸೆಲ್​ ಹಾಕಿಸಿಕೊಂಡಿದ್ದು, ಡೀಸೆಲ್​ ತುಂಬಿದ ಸಿಬ್ಬಂದಿಗೀಗ ಸಂಕಷ್ಟ ಎದುರಾಗಿದೆ.

ನಗರದ ಮೂರನೇ ಬಸ್​ ಡಿಪೋದಲ್ಲಿ ಸಾರಿಗೆ ಇಲಾಖೆಯಿಂದ ನಿರ್ಮಿಸಿದ್ದ ವಿಶ್ರಾಂತಿ ಗೃಹ ಉದ್ಘಾಟನೆಗೆಂದು ಡಿಸಿಎಂ ಲಕ್ಷ್ಮಣ ಸವದಿ ಅವರು ಸ್ವಂತ ಕಾರಿನಲ್ಲಿ ಬಂದಿದ್ದರು. ಇದೇ ವೇಳೆ ಸವದಿ ಅವರ ಕಾರಿಗೆ ಇಲ್ಲಿನ ಸರ್ಕಾರಿ ಬಂಕ್​ನಲ್ಲಿ ಬರೋಬ್ಬರಿ 44 ಲೀಟರ್ ಡೀಸೆಲ್ ಅನ್ನು ತುಂಬಿಸಿಕೊಂಡರು. ಗ್ರಾಮೀಣ ಹಾಗೂ ನಗರದಲ್ಲಿ ಸಂಚರಿಸುವ ಸರ್ಕಾರಿ ಬಸ್ ಗಳಿಗೆ ಮಾತ್ರ ಡೀಸೆಲ್ ಹಾಕಲು ಈ ಡಿಪೋ ಬಂಕ್​ನಲ್ಲಿ ಅವಕಾಶ ಇದೆ. ಆದರೂ ಸಚಿವರ ಖಾಸಗಿ ಕಾರಿಗೆ ಸರ್ಕಾರಿ ಡಿಪೋದಲ್ಲಿ ಡೀಸೆಲ್ ಹಾಕಿದ್ದು, ಚರ್ಚೆಗೆ ಗ್ರಾಸವಾಗಿತ್ತು.

ಡಿಸಿಎಂ ಲಕ್ಷ್ಮಣ ಸವದಿ ಅವರ ಖಾಸಗಿ ವಾಹನಕ್ಕೆ ಸಂಸ್ಥೆಯ ನಿಯಮ ಉಲ್ಲಂಘಿಸಿ 44 ಲೀಟರ್ ಡೀಸೆಲ್​ ಹಾಕಿದ್ದನ್ನು ಪ್ರಶ್ನಿಸಿ ವಾ.ಕ.ರ.ಸಾ.ಸಂಸ್ಥೆ ಬೆಳಗಾವಿ 3ನೇ ಘಟಕದ ವ್ಯವಸ್ಥಾಪಕರು ಶನಿವಾರ ನೋಟಿಸ್ ಜಾರಿ ಮಾಡಿದ್ದಾರೆ.

ನಿಯಮ ಉಲ್ಲಂಘಿಸಿ ಇಂಧನ ಹಾಕಿದ್ದಕ್ಕೆ ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಜರುಗಿಸಬಾರದು? ಎಂದು ಬೆಳಗಾವಿ 3ನೇ ಘಟಕದ ಕಿರಿಯ ಸಹಾಯಕ ಬಿ.ಎಸ್. ಕಿಶೋರ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು 7 ದಿನಗಳ ಒಳಗಾಗಿ ಉತ್ತರಿಸುವಂತೆ ನೋಟಿಸ್​ನಲ್ಲಿ ಗಡುವು ನೀಡಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ