ಬೆಂಗಳೂರು : ಜುಲೈ 15ರಿಂದ ಆರಂಭಗೊಂಡು ಆಗಸ್ಟ್ 5ಕ್ಕೆ ಮುಕ್ತಾಯಗೊಳ್ಳಬೇಕಿದ್ದಂತ ರಾಜ್ಯದಲ್ಲಿನ ಡಿಪ್ಲೊಮೋ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಿರುವ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, ರಾಜ್ಯದಲ್ಲಿ ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳು ಮತ್ತು ಕೋಚಿಂಗ್ ಸೆಂಟರ್, ಇನ್ಸಿಟ್ಯೂಷನ್ ಗಳನ್ನು ಜುಲೈ 31ರವರೆಗೆ ಮುಚ್ಚಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಹಿನ್ನಲೆಯಲ್ಲಿ ದಿನಾಂಕ 15-07-2020ರಿಂದ ದಿನಾಂಕ 05-08-2020ರವರೆಗೆ ನಿಗದಿಪಡಿಸಲಾಗಿದ್ದ ಡಿಪ್ಲೊಮೋ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂಬುದಾಗಿ ತಿಳಿಸಿದೆ.