ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಪತ್ತು ನಿರ್ವಹಣಾ ಘಟಕ ಲೋಕಾರ್ಪಣೆ, ವಿಪತ್ತು ನಿರ್ವಹಣೆ ಸಾಮಾಜಿಕ ಹೊಣೆಗಾರಿಕೆಯಾಗಿದೆ : ಡಾ.ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ ಮತ್ತು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಸ್ವಯಂ ಸೇವಕರು ಧೈರ್ಯ, ತ್ಯಾಗ, ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವ ಹೊಂದಿದ್ದು, ಸ್ವಯಂ ಸ್ಪೂರ್ತಿಯಿಂದ ರಕ್ಷಣಾ ಕಾರ್ಯಕ್ಕೆ ಸದಾ ಬದ್ಧರಾಗಿರಬೇಕು ಹಾಗೂ ಸಿದ್ಧರಾಗಿರಬೇಕು,
ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ತಕ್ಷಣ ಸ್ಪಂದಿಸಬೇಕು. ಮೊದಲು ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡು ಬಳಿಕ ಇತರರ ರಕ್ಷಣೆಗೆ ನೆರವಾಗಬೇಕು. ಪ್ರಜ್ಞಾವಂತರಾಗಿ ತಾವೂ ಬದುಕಿ, ಇತರರೂ ಬದುಕಲು ನೆರವಾಗುವುದು ಮಾನವ ಧರ್ಮವಾಗಿದೆ. ಆಪತ್ತು ನಿರ್ವಹಣೆ ಮಾಡಲು ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ವೈಜ್ಞಾನಿಕವಾಗಿ ಶಿಸ್ತು ಬದ್ಧವಾಗಿ ವಿಪತ್ತು ನಿರ್ವಹಣೆ ಸ್ವಯಂ ಸೇವಕರಿಗೆ ಮಾಹಿತಿ, ಮಾರ್ಗದರ್ಶನ ಹಾಗೂ ತರಬೇತಿಯ ಅಗತ್ಯವಾಗಿದೆ. ರಕ್ಷಣಾ ಪರಿಕರಗಳ ಸಮರ್ಪಕ ಬಳಕೆ ಬಗ್ಗೆಯೂ ಅವರಿಗೆ ಮಾಹಿತಿ ನೀಡಲಾಗುವುದು. ಸ್ವಯಂ ಸೇವಕರು ತಮ್ಮ ಮನೆಯವರಿಗೂ, ನೆರೆಕರೆಯವರಿಗೂ ವಿಪತ್ತು ನಿರ್ವಹಣೆ ಬಗ್ಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಮಾತನಾಡಿ, ಸೂಕ್ತ ತರಬೇತಿಯಿಂದ ಸ್ವಯಂ ಸೇವಕರು ಉತ್ತಮ ರೀತಿಯ ಸೇವೆ ನೀಡಲು ಅನುಕೂಲವಾಗುತ್ತದೆ, ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ಧರ್ಮಸ್ಥಳದ ಕೊಡುಗೆ ಮತ್ತು ಸಹಕಾರವನ್ನು ಧನ್ಯತೆಯಿಂದ ಅವರು ಸ್ಮರಿಸುತ್ತಾ ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ, ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ಜನರ ಪ್ರಾಣ ಹಾಗೂ ಸಂಪತ್ತಿನ ರಕ್ಷಣೆಗೆ ಕಟಿಬದ್ಧರಾಗಿರಬೇಕು ಎಂದು ಸಲಹೆ ನೀಡಿದರು.

ಡಿ. ಸುರೇಂದ್ರ ಕುಮಾರ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಗೋಪಾಲ್‍ಲಾಲ್ ಮೀನಾ, ಮಂಗಳೂರು ಘಟಕದ ಅಧಿಕಾರಿ ವಿಜಯಕುಮಾರ್ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್ ಎಚ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ 55 ಸೂಕ್ಷ್ಮ ಪ್ರದೇಶಗಳಲ್ಲಿ ಸ್ವಯಂ ಸೇವಕರ ತಂಡಗಳನ್ನು ರಚಿಸಿ ತರಬೇತಿ ನೀಡಲಾಗುವುದು.

ಪ್ರಥಮವಾಗಿ ಬೆಳ್ತಂಗಡಿ ತಾಲೂಕಿನ 200 ಸ್ವಯಂ ಸೇವಕರ ತಂಡ ಸೋಮವಾರ ಧರ್ಮಸ್ಥಳದಲ್ಲಿ ಉದ್ಘಾಟನೆ ಮಾಡಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಗೋಪಾಲ್‍ ಲಾಲ್ ಮೀನಾ ವಿಪತ್ತು ನಿರ್ವಹಣೆ ಹಾಗೂ ಪರಿಕರಗಳ ಬಳಕೆ ಬಗ್ಗೆ ತರಬೇತಿ ನೀಡಿದರು.

ಸ್ವಯಂ ಸೇವಕರಿಗೆ ರಕ್ಷಣಾ ಪರಿಕರಗಳನ್ನು ವಿತರಣೆಯ ಜೊತೆಗೆ ನೇತ್ರಾವತಿ ಸ್ನಾನಘಟ್ಟದಲ್ಲಿ ವಿಪತ್ತು ನಿರ್ವಹಣೆಯ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಲಾಯಿತು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ