ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನ!

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುಮಾರು ಒಂದು ತಿಂಗಳಿನಿಂದ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಪ್ರಕರಣಕ್ಕೆ ಮತ್ತೊಂಧು ಹೊಸ ತಿರುವು ಸಿಕ್ಕಿದೆ. ಕೊರೊನಾ ಸೋಂಕು ತಗಲಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್ ರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ನಾಪತ್ತೆಯಾಗಿದ್ದರು.

READ ALSO

ಅವರಿಗಾಗಿ ತೀವ್ರ ಹುಡುಕಾಟ ನಡೆಸಿದ ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ, ಪೊಲೀಸ್ ಠಾಣೆಯಲ್ಲಿ ಗಲಾಟೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪ ಸಂಪತ್ ರಾಜ್ ಮೇಲಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗೆ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ.