ಮಂಗಳೂರು: ಕೊರೋನಾ ಮಹಾಮಾರಿಯ ಅಟ್ಟಹಾಸ ಮಿತಿಮೀರುತಿದ್ದು ಇಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ ಕೋವಿಡ್ 19 ಸೋಂಕು ದೃಢವಾಗಿದೆ.
ಈ ವಿಚಾರವನ್ನು ಸ್ವತಃ ಅವರ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.
ಕೋವಿಡ್ -19 ಪರೀಕ್ಷೆಯಲ್ಲಿ ನನ್ನ ವರದಿ ಪಾಸಿಟಿವ್ ಎಂದು ದೃಢವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಸುರಕ್ಷಿತವಾಗಿರಿ ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.