ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ (ಆಗಸ್ಟ್ 02)ರಂದು ಜಿಲ್ಲೆಯ ಪದವಿ ಪೂರ್ವ ಕಾಲೇಜುವರಿಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಮಕ್ಕಳು ಹಾಗೂ ಪೋಷಕರು ಮಳೆಯ ತೀವ್ರತೆ ಬಗ್ಗೆ ಅರಿತುಕೊಂಡು ನದಿತೀರಗಳಿಗೆ, ಬೆಟ್ಟ ಗುಡ್ಡ ಪ್ರದೇಶಗಳಿಗೆ ಹೋಗದೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಬಗ್ಗೆ ಸೂಚನೆ ನೀಡಲಾಗಿದೆ