ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಸರಾ ರಜೆಯನ್ನು ಒಂದು ದಿನ ಹೆಚ್ಚುವರಿಯಾಗಿ ವಿಸ್ತರಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ದಿನಾಂಕ 22/10/2026 ರಂದು ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಅಕ್ಟೋಬರ್ 21ರಂದು ಐತಿಹಾಸಿಕ ದಸರಾ ಹಬ್ಬದ ಪೂಜೆ ಹಾಗೂ ಮೆರವಣಿಗೆಯ ಅಂತಿಮ ದಿನವಾಗಿದ್ದು, ರಾತ್ರಿ ವೇಳೆ ನಡೆಯುವ ಪೂಜೆ ಮತ್ತು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಾಗೂ ಪೋಷಕರು ಭಾಗವಹಿಸುತ್ತಾರೆ. ದೂರದ ಪ್ರದೇಶಗಳಿಗೆ ತೆರಳಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಮರಳಿ ಮನೆ ತಲುಪಲು ವಿಳಂಬವಾಗುವ ಸಾಧ್ಯತೆಯಿರುವುದರಿಂದ, ಅಕ್ಟೋಬರ್ 22ರಂದು ಶಾಲೆಗಳಿಗೆ ಹಾಜರಾಗುವುದು ಕಷ್ಟವಾಗಬಹುದು ಎಂದು ಮನವಿ ಸಲ್ಲಿಸಲಾಗಿತ್ತು.

ಈ ಮನವಿಯನ್ನು ಪರಿಶೀಲಿಸಿ, ಈಗಾಗಲೇ ಅಕ್ಟೋಬರ್ 3ರಿಂದ 21ರವರೆಗೆ ಘೋಷಿಸಲಾಗಿದ್ದ ದಸರಾ ರಜೆಯನ್ನು ಅಕ್ಟೋಬರ್ 22ರವರೆಗೆ ಒಂದು ದಿನ ಹೆಚ್ಚುವರಿಯಾಗಿ ವಿಸ್ತರಿಸಿ ಆದೇಶಿಸಲಾಗಿದೆ.

ಸ್ಥಳೀಯ ರಜೆ ಬಳಸಿ ಸರಿದೂಗಿಸಲು ಸೂಚನೆ: ವಿಸ್ತರಿಸಲಾದ ಒಂದು ದಿನದ ರಜೆಯಿಂದ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅದರಂತೆ, ಶಾಲಾ ಮುಖ್ಯ ಶಿಕ್ಷಕರ ವಿವೇಚನೆಯಡಿ ನೀಡಲಾಗಿರುವ ನಾಲ್ಕು ಸ್ಥಳೀಯ ರಜೆಗಳ ಪೈಕಿ ಒಂದು ರಜೆಯನ್ನು ಬಳಸಿಕೊಂಡು ಸರಿದೂಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಈ ಆದೇಶ ತಲುಪುವಂತೆ ಕ್ರಮವಹಿಸಲು ಸೂಚಿಸಲಾಗಿದೆ.

Spread the love
  • Related Posts

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ…

    Spread the love

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    You Missed

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    • By admin
    • October 21, 2026
    • 2 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 4 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 6 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 7 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 9 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 11 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ