ಮಂಗಳೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ), ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ 12ನೇ ತರಗತಿಯ ವಿದ್ಯಾರ್ಥಿಗಳಿಗೆ (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ), ಹಾಗೂ ಎಲ್ಲಾ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ) 2026ರ ಜುಲೈ 24, ಶುಕ್ರವಾರ ರಜೆ ಘೋಷಿಸಲಾಗಿದೆ.
ಜಿಲ್ಲಾಡಳಿತ ಹೊರಡಿಸಿರುವ ಆದೇಶದಂತೆ, ಈ ಆದೇಶವನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಪ್ರಕಾರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.





