ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

ಮಂಗಳೂರು, ಜುಲೈ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

Oplus_16908288

ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು 2026ರ ಜುಲೈ 8ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ 12ನೇ ತರಗತಿಯವರೆಗೆ (ಪದವಿ ಪೂರ್ವ ಸೇರಿದಂತೆ) ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.

ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ–2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಜಿಲ್ಲಾಡಳಿತವು ಸಾರ್ವಜನಿಕರಿಗೆ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ

:ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು.ಮೀನುಗಾರರು ಸಮುದ್ರಕ್ಕೆ ಇಳಿಯಬಾರದು.ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳುವುದನ್ನು ತಪ್ಪಿಸಬೇಕು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿರಬೇಕು.ಪ್ರತಿ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಿತ ಇಲಾಖೆಗೆ ಸೂಚಿಸಲಾಗಿದೆ.ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

Spread the love
  • Related Posts

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕೊಟ್ಟಾಯಂ (ಕೇರಳ): ಕೇರಳದಾದ್ಯಂತ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಕೋಟ್ಯಂತರ ಆನೆ ಪ್ರಿಯರ ಹೃದಯ ಗೆದ್ದಿದ್ದ ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಭಾನುವಾರ ಸಿಡಿಲು ಬಡಿದು ದುರಂತವಾಗಿ ಸಾವನ್ನಪ್ಪಿದೆ. ಎರಟ್ಟುಪೆಟ್ಟಾ ಬಳಿಯ ಮೇಲಂಪಾರದಲ್ಲಿ ಈ ಆಘಾತಕಾರಿ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…

    Spread the love

    You Missed

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 4 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 5 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 7 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 11 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 14 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 12 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”