ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ.) ವತಿಯಿಂದ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ. ಕೊಸ್ತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯ ಮುಂದಿನ ರೂಪುರೇಷೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಜಿಲ್ಲೆಯ ವಕೀಲರ ಶ್ರೇಯೋಭಿವೃದ್ಧಿಗಾಗಿ ಸೊಸೈಟಿ ರಚಿಸುವ ಬಗ್ಗೆ ಹಾಗೂ ಜಿಲ್ಲೆಯ ವಿವಿಧ ವಕೀಲರ ಸಂಘಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಿತು. ಇದಲ್ಲದೆ, ವಕೀಲರ ಹಿತಾಸಕ್ತಿ ಹಾಗೂ ಸಂಘದ ಮುಂದಿನ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.

ಸಭೆಯಲ್ಲಿ ಮಂಗಳೂರು ನಿಕಟಪೂರ್ವ ಅಧ್ಯಕ್ಷರಾದ ರಾಘವೇಂದ್ರ ಎಚ್.ವಿ., ಸುಳ್ಯ ಅಧ್ಯಕ್ಷರಾದ ಸುಕುಮಾರ್ ಕುರ್ತುಕುಳಿ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಸಿಯಸ್ ಎಸ್ ಲೋಬೊ, ಮೂಡಬಿದ್ರೆ ನಿಕಟಪೂರ್ವ ಅಧ್ಯಕ್ಷರಾದ ಹರೀಶ್, ಜಗನ್ನಾಥ ರೈ, ದಯಾನಂದ್, ಬೆಳ್ತಂಗಡಿ ನಿಕಟಪೂರ್ವ ಕಾರ್ಯದರ್ಶಿ ಜಯಪ್ರಕಾಶ್, ದಕ್ಷಿಣ ಕನ್ನಡ ಜಿಲ್ಲಾ ಜೊತೆ ಕಾರ್ಯದರ್ಶಿ ನವೀನ್ ಬಿ.ಕೆ., ಸದಸ್ಯರಾದ ಮನೋಹರ್ ಕುಮಾರ್ ಎ., ಶ್ರೀನಿವಾಸ ಗೌಡ ಬೆಳಾಲು ಹಾಗೂ ನರೇಂದ್ರ ಬಂಟ್ವಾಳ ಉಪಸ್ಥಿತರಿದ್ದರು.

ಸಭೆಯಲ್ಲಿ ಜಿಲ್ಲೆಯ ವಕೀಲರ ಸಂಘಗಳ ಬಲವರ್ಧನೆ ಹಾಗೂ ವಕೀಲರ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಯಿತು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 9 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ