ಮಂಗಳೂರು: ದ.ಕ ಜಿಲ್ಲೆ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಅದರಂತೆ ಜೂನ್ 20 ರವರೆಗೆ ಲಾಕ್ ಆಗಲಿದೆ ದಕ್ಷಿಣಕನ್ನಡ. ಕೆಲವೊಂದು ನಿರ್ದಿಷ್ಟ ವಿಚಾರಗಳಿಗೆ ಸಡಿಲಿಕೆ ಮಾಡಿ ದ.ಕ ಜಿಲ್ಲೆ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಿದ್ರು. ಈ ವೇಳೆ ದ.ಕ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ಗೆ ದ.ಕ ಡಿಸಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿದ್ರು. ಪಾಸಿಟಿವಿಟಿ ರೇಟ್ ಕಡಿಮೆಯಾಗದ ಹಿನ್ನೆಲೆ ಬಿಗಿ ಕ್ರಮಕ್ಕೆ ಡಿಸಿ ಮನವಿ ಮಾಡಿದ್ರು. ಸಿಎಂ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಡಿಸಿ ರಾಜೇಂದ್ರ ಲಾಕ್ ಡೌನ್ ಗೆ ನಿರ್ಧಾರ ತೆಗೆದುಕೊಂಡಿದ್ದಾರೆ. ಅದರಂತೆ ನಾಳೆ ಮತ್ತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಸೇರಿ ಲಾಕ್ ಡೌನ್ ರೂಪುರೇಷೆ ಸಿದ್ಧಪಡಿಸಲಿದ್ದಾರೆ.