ದ.ಕ ಜಿಲ್ಲಾ ನೂತನ ಎಸ್ಪಿ ಯಾಗಿ ರಿಷಿಕೇಶ್ ಭಗವಾನ್ ಸೋನಾವಣೆ ನೇಮಕ

ಮಂಗಳೂರು: ದಕ್ಷಿಣಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ರಿಷಿಕೇಶ್ ಭಗವಾನ್ ಸೋನಾವಣೆ ಯವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿರುವ ಡಾ.ಬಿ.ಎಂ ಲಕ್ಷ್ಮೀಪ್ರಸಾದ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಇದೇ ವೇಳೆ ವರ್ಗಾವಣೆ ಮಾಡಲಾಗಿದೆ. ಸೋನವಣೆ ಖುಷಿಕೇಶ್ ಭಗವಾನ್ ಅವರು ಈ ಹಿಂದೆ ಕರಾವಳಿಯ ಕಾರ್ಕಳ ಹಾಗೂ ಬಂಟ್ವಾಳದಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಲೋಕಾಯುಕ್ತ ಎಸ್ಪಿಯಾಗಿ ಮತ್ತು ಯಾದಗಿರಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

READ ALSO