ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರಿನ ಕಮ್ಮಾಜೆ, ನೆಲ್ಲಿತೀರ್ಥ, ಗುರುಪುರ ಮೂಡಬಿದ್ರೆಯ ಕಲ್ಲಬೆಟ್ಟು, ಬೆಳ್ತಂಗಡಿಯ ಮುಂಡಾಜೆ, ಮಚ್ಚಿನ, ಹೊಸಂಗಡಿ ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್/ ಶ್ರೀಮತಿ. ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6ನೇತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
6 ರಿಂದ 10ನೇತರಗತಿಯ ವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುವುದು.
ಅಭ್ಯರ್ಥಿಯು ತನ್ನ ಎಸ್ಎಟಿಎಸ್ ಸಂಖ್ಯೆ, ಭಾವಚಿತ್ರ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:25.08.2020 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲಾ ಪ್ರಾಂಶುಪಾಲರನ್ನು ಸಂಪರ್ಕಿಸ ಬಹುದು.
ದೂರವಾಣಿ ಸಂಖ್ಯೆಗಳು: ಮಂಗಳೂರು (9448336606, 8762328613, 9480241974), ಮೂಡಬಿದ್ರೆ (9902338382), ಬಂಟ್ವಾಳ (9008135090), ಬೆಳ್ತಂಗಡಿ (9242217114, 9481971148, 9108127379) ಪುತ್ತೂರು (9731579469, 9945170450) ಸುಳ್ಯ (9164073223)