ಬೆಳ್ತಂಗಡಿ: ಫೆ.3ರಿಂದ 5 ರ ವರೆಗೆ ಉಜಿರೆಯಲ್ಲಿ ನಡೆಯಲಿರುವ, ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಸರ್ವಧ್ಯಕ್ಷತೆಯ ದ.ಕ ಜಿಲ್ಲಾ 25 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಹರೀಶ್ ಮಂಜೊಟ್ಟಿಯವರು ಆಯ್ಕೆಯಾಗಿದ್ದಾರೆ. ಇವರು ಎರಡು ತುಳು ನಾಟಕ, ಎರಡು ಕವನ ಸಂಕಲನ, ಒಂದು ದೈವಾರಾಧನೆಯ ಬಗೆಗೆನ ಕೃತಿ ರಚಿಸಿದ್ದು, ಹಲವಾರು ಲೇಖನ, ಕವನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ. ಪ್ರಸ್ತುತ ಇವರು ಪೊಲೀಸ್ ಇಲಾಖೆ ಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…